ಸ್ನಾತಕ, ಸ್ನಾತಕೋತ್ತರ ಪದವಿಯ ವಿದ್ಯಾರ್ಥಿನಿಯರ ಶುಲ್ಕ ಮರುಪಾವತಿಗೆ ಕ್ರಮ ವಹಿಸಲು ಪ್ರಾಂಶುಪಾಲರಿಗೆ ಸೂಚನೆ
Update: 2022-02-16 00:01 IST
ಬೆಂಗಳೂರು, ಫೆ.15: ರಾಜ್ಯದ ಸರಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಓದುತ್ತಿರುವ ವಿದ್ಯಾರ್ಥಿನಿಯರ ಶುಲ್ಕ ಮರು ಪಾವತಿ ಮಾಡಲು ಕ್ರಮ ವಹಿಸಿ ಎಂದು ಕಾಲೇಜು ಶಿಕ್ಷಣ ನಿರ್ದೇಶಕರು ಕಾಲೇಜು ಪ್ರಾಂಶುಪಾಲರಿಗೆ ಆದೇಶ ನೀಡಿದ್ದಾರೆ.
2021-22ನೇ ಶೈಕ್ಷಣಿಕ ಸಾಲಿನಲ್ಲಿ ಯಾವುದೇ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸದ ವಿದ್ಯಾರ್ಥಿನಿಯರಿಗೆ ಪೂರ್ಣ ಶುಲ್ಕ ವಿನಾಯಿತಿ ನೀಡಲು ಸರಕಾರ ನಿರ್ಧರಿಸಿದ್ದು, 12,09,25,897 ರೂ.ಗಳ ಅನುದಾನವನ್ನು ಸರಕಾರವು ಬಿಡುಗಡೆ ಮಾಡಿದೆ. ಉನ್ನತ ಶಿಕ್ಷಣ ಪಡೆಯಲು ಹೆಣ್ಣು ಮಕ್ಕಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಎಲ್ಲಾ ವಿದ್ಯಾರ್ಥಿನಿಯರಿಗೆ ಪೂರ್ಣ ಪ್ರಮಾಣದ ಶುಲ್ಕು ವಿನಾಯಿತಿ ನೀಡಲು ಆದೇಶಿಸಲಾಗಿದೆ.