ತೆಲಂಗಾಣ ಮುಖ್ಯಮಂತ್ರಿ ಚಂದ್ರಶೇಖರ್ ರಾವ್ ಅವರನ್ನು ಊಟಕ್ಕೆ ಆಹ್ವಾನಿಸಿದ ಉದ್ಧವ್ ಠಾಕ್ರೆ

Update: 2022-02-16 09:27 GMT

ಹೊಸದಿಲ್ಲಿ: ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರನ್ನು ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ರವಿವಾರ (ಫೆಬ್ರವರಿ 20) ಊಟಕ್ಕೆ ಆಹ್ವಾನಿಸಿದ್ದಾರೆ ಎಂದು ಅವರ ಕಚೇರಿ ಇಂದು ತಿಳಿಸಿದೆ.

ನೀವು ಒಳ್ಳೆಯ ಕೆಲಸ ಮಾಡುತ್ತಿದ್ದೀರಿ. ಅದನ್ನು ಮುಂದುವರಿಸಿ. ಹಮ್ ಆಪ್ಕೆ ಸಾಥ್ ಹೇ (ನಾವು ನಿಮ್ಮೊಂದಿಗಿದ್ದೇವೆ)ಎಂದು ಉದ್ಧವ್ ಠಾಕ್ರೆಗೆ ರಾವ್ ಹೇಳಿದ್ದಾರೆ ಎಂದು ಕೆಸಿಆರ್ ಕಚೇರಿ ತಿಳಿಸಿದೆ.

2024 ರ ರಾಷ್ಟ್ರೀಯ ಚುನಾವಣೆಗೆ ಬಿಜೆಪಿ ವಿರುದ್ಧ ಶಕ್ತಿಗಳನ್ನು ಕ್ರೋಢೀಕರಿಸಲು ಕೆಸಿಆರ್ ಅವರು ಮುಖ್ಯಮಂತ್ರಿ ಹಾಗೂ ಶಿವಸೇನೆ ಮುಖ್ಯಸ್ಥ ಠಾಕ್ರೆಯವರನ್ನು ಭೇಟಿ ಮಾಡಲು ಮುಂಬೈಗೆ ಭೇಟಿ ನೀಡುವ ಯೋಜನೆಗಳ ಬಗ್ಗೆ  ಈಗಾಗಲೇ ಮಾತನಾಡಿದ್ದರು. ನಿನ್ನೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಜನತಾದಳ (ಜಾತ್ಯತೀತ) ಬೆಂಬಲವನ್ನು ಪಡೆದಿದ್ದರು.

ದೇವೇಗೌಡ  ಕರೆ ಮಾಡಿ  "ಕೋಮುವಾದಿ" ಶಕ್ತಿಗಳ ವಿರುದ್ಧದ ಹೋರಾಟಕ್ಕೆ ಸಂಪೂರ್ಣ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿಯ ಮೂಲಗಳು NDTV ಗೆ ತಿಳಿಸಿವೆ.

ತೆಲಂಗಾಣ ಮುಖ್ಯಮಂತ್ರಿ ಹಲವು ವಿರೋಧ ಪಕ್ಷದ ನಾಯಕರೊಂದಿಗೆ ಮಾತನಾಡುತ್ತಿದ್ದಾರೆ.

ಕಳೆದ ಕೆಲವು ವಾರಗಳಲ್ಲಿ ರಾವ್ ಅವರು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹಾಗೂ  ಆರ್ ಜೆಡಿ ನಾಯಕ ತೇಜಸ್ವಿ ಯಾದವ್ ಅವರನ್ನು ಭೇಟಿ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News