×
Ad

ಹೊಸಕೋಟೆ: ರಸ್ತೆ ಅಪಘಾತಕ್ಕೆ ನಾಲ್ವರು ಕಾಲೇಜು ವಿದ್ಯಾರ್ಥಿಗಳು ಬಲಿ

Update: 2022-02-16 15:16 IST

ಬೆಂಗಳೂರು, ಫೆ.16: ಹೊಸಕೋಟೆ ಬಳಿಯ ರಾಷ್ಟ್ರೀಯ ಹೆದ್ದಾರಿ–75ರ ಅಟ್ಟೂರು ಗೇಟ್ ಬಳಿ ಇಂದು ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾಲೇಜು ವಿದ್ಯಾರ್ಥಿನಿಯೊಬ್ಬಳ ಸಹಿತ ನಾಲ್ವರು ವಿದ್ಯಾರ್ಥಿಗಳು ಮೃತಪಟ್ಟ ಘಟನೆ ವರದಿಯಾಗಿದೆ.

ಮೃತರನ್ನು ತಮಿಳುನಾಡು ಮೂಲದ ವೈಷ್ಣವಿ, ವೆಂಕಟ್, ಸಿರಿಲ್ ಹಾಗೂ ಭರತ್ ಎಂಬವರು ಮೃತಪಟ್ಟವರಾಗಿದ್ದಾರೆ. ಸಿರಿ ಕೃಷ್ಣ ಮತ್ತು ಅಂಕಿತಾ ರೆಡ್ಡಿ ಎಂಬವರು ಗಾಯಗೊಂಡಿದ್ದಾರೆ.

ಬೆಂಗಳೂರಿನ ಗಾರ್ಡನ್ ಸಿಟಿ ಕಾಲೇಜಿನ ವಿದ್ಯಾರ್ಥಿಗಳಾಗಿದ್ದ ಇವರು ಕೋಲಾರದ ಕೆಫೆ ಕೇಂದ್ರದಿಂದ ವಾಪಸ್ ಆಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

ವಿದ್ಯಾರ್ಥಿಗಳು ಸಂಚರಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಇನ್ನೊಂದು ಬದಿಯ ರಸ್ತೆ ಹಾರಿ ಲಾರಿಯೊಂದಕ್ಕೆ ಢಿಕ್ಕಿ ಹೊಡದಿದೆ ಎನ್ನಲಾಗಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ಜಖಂಗೊಂಡಿದೆ.

ಈ ಬಗ್ಗೆ ಹೊಸಕೋಟೆ ಪೊಲೀಸ್‍ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News