ಬೆಂಗಳೂರಿನಲ್ಲಿ 3 ಲಕ್ಷ ಮೌಲ್ಯದ ಎಂಡಿಎಂಎ ಜಪ್ತಿ: ಆರೋಪಿಗಳ ಬಂಧನ
Update: 2022-02-16 18:28 IST
ಬೆಂಗಳೂರು, ಫೆ.16: ಮಾದಕ ವಸ್ತು ಮಾರಾಟ ಸರಬರಾಜು ವಿರುದ್ಧ ಕಾರ್ಯಾಚರಣೆ ತೀವ್ರಗೊಳಿಸಿರುವ ಸಿಸಿಬಿ ಪೊಲೀಸರು ಕೇರಳ ಮೂಲದ ಇಬ್ಬರನ್ನು ಬಂಧಿಸಿ 3 ಲಕ್ಷ ಮೌಲ್ಯದ ಎಂಡಿಎಂಎ ವಶಪಡಿಸಿಕೊಂಡಿದ್ದಾರೆ.
ಎಚ್‍ಎಎಲ್‍ನಲ್ಲಿ ಬಾಡಿಗೆಗೆ ಮನೆ ಮಾಡಿಕೊಂಡು ವಾಸಿಸುತ್ತಿದ್ದ ಕೇರಳ ಮೂಲದ ಸಮೀರ್(28) ಹಾಗೂ ಶಬ್ಬೀರ್(26) ಬಂಧಿತ ಆರೋಪಿಗಳಾಗಿದ್ದಾರೆ ಎಂದು ಜಂಟಿ ಪೊಲೀಸ್ ಆಯುಕ್ತ ರಮಣ್ ಗುಪ್ತ ತಿಳಿಸಿದ್ದಾರೆ.
ಎಚ್‍ಎಎಲ್ ಮನೆಯೊಂದರಲ್ಲಿ ನಿನ್ನೆ ಎಂಡಿಎಂಎ ಡ್ರಗ್ಸ್ ಇಟ್ಟುಕೊಂಡು ಕಾಲೇಜು ವಿದ್ಯಾರ್ಥಿಗಳಿಗೆ, ಸಾಫ್ಟ್ ವೇರ್ ಉದ್ಯೋಗಿಗಳಿಗೆ ಹಾಗೂ ಗಿರಾಕಿಗಳಿಗೆ ಮಾರಾಟ ಮಾಡಲು ಯತ್ನಿಸುತ್ತಿದ್ದ ಖಚಿತ ಮಾಹಿತಿ ಪಡೆದು ಡಿಸಿಪಿ ಬಸವರಾಜ ಅಂಗಡಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಬಂಧಿಸಲಾಗಿದೆ ಎಂದರು.
ಆರೋಪಿಗಳಿಂದ 3 ಲಕ್ಷ ಮೌಲ್ಯದ 52 ಗ್ರಾಂ ಎಂಡಿಎಂಎ, 2 ಮೊಬೈಲ್‍ಗಳು ಇತರೇ ವಸ್ತುಗಳನ್ನು ವಶಪಡಿಸಿಕೊಂಡು ಎಚ್‍ಎಎಲ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದರು.