ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದಿಂದ ರಿಯಾಯಿತಿ ದರದಲ್ಲಿ ಧಾರ್ಮಿಕ ಪ್ರವಾಸ
ಬೆಂಗಳೂರು, ಫೆ. 16: ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮವು 50 ವರ್ಷ ಪೂರೈಸಿದ ಶುಭ ಸಂದರ್ಭದಲ್ಲಿ ನಿಗಮದಿಂದ ಆಯೋಜನೆ ಮಾಡಲಾಗುತ್ತಿರುವ ಧಾರ್ಮಿಕ ಪ್ರವಾಸಗಳಿಗೆ ಶೇ.25 ರಷ್ಟು ರಿಯಾಯಿತಿ ನೀಡಿ, ಮಾ. 22ರ ಅಂತ್ಯದವರೆಗೆ ಆಯೋಜನೆ ಮಾಡಲಾಗುತ್ತಿದೆ ಎಂದು ನಿಗಮದ ಪ್ರಕಟನೆ ತಿಳಿಸಿದೆ.
ಪ್ರವಾಸಿಗರಿಗೆ ಪ್ರಮುಖವಾಗಿ ಕರ್ನಾಟಕ ಹಾಗೂ ದಕ್ಷಿಣ ರಾಜ್ಯಗಳ ವಿವಿಧ ಧಾರ್ಮಿಕ, ಐತಿಹಾಸಿಕ, ಪಾರಂಪರಿಕ, ಭೌಗೋಳಿಕ, ನೈಸರ್ಗಿಕ ಪ್ರವಾಸಿ ತಾಣಗಳಿಗೆ ವಿವಿಧ 24 ವ್ಯವಸ್ಥಿತ ಪ್ರವಾಸಗಳನ್ನು ಆಯೋಜನೆ ಮಾಡಲಾಗುತ್ತಿದೆ.
ನಿಗಮವು ದಕ್ಷಿಣ ರಾಜ್ಯಗಳನ್ನೊಳಗೊಂಡ ರಾಜ್ಯ ಮತ್ತು ಅಂತರಾಜ್ಯ ಮಟ್ಟದಲ್ಲಿ ಪ್ರವಾಸಗಳನ್ನು ಆಯೋಜನೆ ಮಾಡಲಾಗುತ್ತಿದೆ. ಪ್ರಸ್ತುತ ಈ ಪ್ರವಾಸಗಳ ಸೇವೆಗಳ ಸದುಪಯೋಗ ಪಡೆಯಲಿಚ್ಛಿಸುವ ಪ್ರವಾಸಿಗರು ನಿಗಮದ ಯಶವಂತಪುರ ಕೇಂದ್ರ ಕಚೇರಿಯ ಬುಕ್ಕಿಂಗ್ ಕೌಂಟರ್, ಕೆಂಪೇಗೌಡ ಬುಕ್ಕಿಂಗ್ ಕೌಂಟರ್, ರೆಡ್ಬಸ್ ಪೋರ್ಟಲ್, ಕೆ.ಎಸ್.ಆರ್.ಟಿ.ಸಿ ಅವತಾರ್ ಹಾಗೂ ನಿಗಮದ ಅಧಿಕೃತ ಟ್ರಾವೆಲ್ ಏಜೆಂಟ್‍ಗಳ ಮುಖಾಂತರ ಮುಂಗಡ ಬುಕ್ಕಿಂಗ್ ಮಾಡಬಹುದಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಆನ್ಲೈನ್ ಬುಕ್ಕಿಂಗ್: http://www.kstdc.co ದೂ: 080-4334 4334/35, 8970650070/8970650075 ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.