×
Ad

ಮಣಿಪಾಲ: ಮಾಹೆಯಿಂದ ಮೆಗಾ ವೃತ್ತಿಪರ ಬಾಕ್ಸಿಂಗ್ ಕೂಟ; ರಾಷ್ಟ್ರೀಯ-ಅಂತಾರಾಷ್ಟ್ರೀಯ ಬಾಕ್ಸರ್‌ಗಳ ಸ್ಪರ್ಧೆ ನಿರೀಕ್ಷೆ

Update: 2022-02-17 18:48 IST

ಉಡುಪಿ, ಫೆ.17: ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ (ಮಾಹೆ) ಮೊತ್ತ ಮೊದಲ ಬಾರಿಗೆ ಕರಾವಳಿ ಭಾಗದಲ್ಲಿ ವೃತ್ತಿಪರ ಬಾಕ್ಸಿಂಗ್ ಕೂಟವೊಂದನ್ನು ಮುಂದಿನ ಎಪ್ರಿಲ್ ತಿಂಗಳಲ್ಲಿ ಆಯೋಜಿಸಲಿದೆ ಎಂದು ಮಾಹೆಯ ಪ್ರೊ ಚಾನ್ಸಲರ್ ಡಾ.ಎಚ್.ಎಸ್.ಬಲ್ಲಾಳ್ ಪ್ರಕಟಿಸಿದ್ದಾರೆ.

ಈ ಸಂಬಂಧ ಇಂದು ಮಣಿಪಾಲಕ್ಕೆ ಭೇಟಿ ನೀಡಿದ ಭಾರತದ ಪ್ರಮುಖ ವೃತ್ತಿಪರ ಬಾಕ್ಸರ್ ಆಗಿರುವ ನೀರಜ್ ಗೋಯತ್ ಅವರೊಂದಿಗೆ ಚರ್ಚಿಸಿದ ಬಳಿಕ ಅವರು ಈ ವಿಷಯ ಪ್ರಕಟಿಸಿದರು. ಬಾಕ್ಸಿಂಗ್ ಕೂಟ ಮುಂದಿನ ಎಪ್ರಿಲ್ ತಿಂಗಳಲ್ಲಿ ನಡೆಯುವ ಸಾಧ್ಯತೆ ಇದ್ದು, ಇದರಲ್ಲಿ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟ ಪ್ರಮುಖ ಬಾಕ್ಸರ್‌ಗಳು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದವರು ಹೇಳಿದರು.

ನೀರಜ್ ಗೋಯತ್ ಅವರು 2008ರಲ್ಲಿ ‘ಭಾರತದ ಉದಯೋನ್ಮುಖ ಬಾಕ್ಸರ್’ ಪ್ರಶಸ್ತಿಯನ್ನು ಜಯಿಸಿದ್ದರು. ಡಬ್ಲುಬಿಸಿ ವಿಶ್ವ ರ್ಯಾಂಕಿಂಗ್‌ನಲ್ಲಿ ಸ್ಥಾನ ಪಡೆದ ಮೊತ್ತಮೊದಲ ವೃತ್ತಿಪರ ಬಾಕ್ಸರ್ ಇವರಾಗಿದ್ದಾರೆ. ನೀರಜ್ ಅವರು ಮಾಹೆಯ ಸಹಯೋಗದೊಂದಿಗೆ ಮಣಿಪಾಲದಲ್ಲಿ ಮೆಗಾ ವೃತ್ತಿಪರ ಬಾಕ್ಸಿಂಗ್ ಪ್ರದರ್ಶನವನ್ನು ಏರ್ಪಡಿಸಲಿದ್ದಾರೆ.

ಗೋಯತ್ ಅವರು ಮಾಹೆಗೆ ಭೇಟಿ ನೀಡಿದ್ದು, ಈ ವೇಳೆ ಅವರು ಮಾಹೆಯ ಮರಿನಾ ಒಳಾಂಗಣ ಕ್ರೀಡಾ ಸಂಕೀರ್ಣವನ್ನು ವೀಕ್ಷಿಸಿದರು. ಮಾಹೆಯಲ್ಲಿರುವ ಕ್ರೀಡಾ ಸೌಲಭ್ಯಗಳನ್ನು ವೀಕ್ಷಿಸಿ ರೋಮಾಂಚಿತರಾದರು. ಈ ಸಂದರ್ಭದಲ್ಲಿ ಅವರು ಮಾಹೆಯ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ್ದು, ವಿದ್ಯಾರ್ಥಿ ಜೀವನದಲ್ಲಿ ಎದುರಾಗುವ ಹಲವು ಸವಾಲುಗಳನ್ನು ಎದುರಿಸಲು ಇದು ಶಕ್ತಿ ತುಂಬಲಿದ್ದು, ಸ್ಪೂರ್ತಿಯ ಚಿಲುಮೆಯಾಗಿರುತ್ತದೆ ಎಂದರು.

ಮಾಹೆಯ ಕುಲಪತಿ ಲೆ.ಜ.ಡಾ.ಎಂ.ಡಿ.ವೆಂಕಟೇಶ್ ಮಾತನಾಡಿ, ಕ್ರೀಡೆ ಎಂಬುದು ಪ್ರತಿಯೊಬ್ಬರ ವೈಯಕ್ತಿಕ ವ್ಯಕ್ತಿತ್ವದ ಮೇಲೆ ದೊಡ್ಡ ಪರಿಣಾಮವನ್ನು ಬೀರುತ್ತದೆ. ಹೀಗಾಗಿ ನಾವು ನಮ್ಮೆಲ್ಲಾ ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆ ಗಳಲ್ಲಿ ತೊಡಗಿಸಿಕೊಳ್ಳುವಂತೆ ಪ್ರೋತ್ಸಾಹಿಸುತ್ತೇವೆ. ನಮ್ಮ ವಿದ್ಯಾರ್ಥಿಗಳೂ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿಂಚುವ ಸಾವುರ್ಥ್ಯವನ್ನು ಹೊಂದಿದ್ದಾರೆ ಎಂದರು.

ಮಾಹೆಯ ಕುಲಪತಿ ಲೆ.ಜ.ಡಾ.ಎಂ.ಡಿ.ವೆಂಕಟೇಶ್ ಮಾತನಾಡಿ, ಕ್ರೀಡೆ ಎಂಬುದು ಪ್ರತಿಯೊಬ್ಬರ ವೈಯಕ್ತಿಕ ವ್ಯಕ್ತಿತ್ವದ ಮೇಲೆ ದೊಡ್ಡ ಪರಿಣಾಮವನ್ನು ಬೀರುತ್ತದೆ. ಹೀಗಾಗಿ ನಾವು ನಮ್ಮೆಲ್ಲಾ ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆ ಗಳಲ್ಲಿ ತೊಡಗಿಸಿಕೊಳ್ಳುವಂತೆ ಪ್ರೋತ್ಸಾಹಿಸುತ್ತೇವೆ. ನಮ್ಮ ವಿದ್ಯಾರ್ಥಿಗಳೂ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿಂಚುವ ಸಾಮರ್ಥ್ಯವನ್ನು ಹೊಂದಿದ್ದಾರೆ ಎಂದರು.

ಮಾಹೆಯ ರಿಜಿಸ್ಟ್ರಾರ್ ಡಾ.ನಾರಾಯಣ ಸಭಾಹಿತ್, ಮಾಹೆಯ ಸಾರ್ವಜನಿಕ ಹಾಗೂ ಪತ್ರಿಕಾ ಸಂಪರ್ಕ ನಿರ್ದೇಶಕ ಎಸ್.ಪಿ.ಕರ್, ಕ್ರೀಡಾ ಕೌನ್ಸಿಲ್‌ನ ಕಾರ್ಯದರ್ಶಿ ಡಾ.ವಿನೋದ್ ನಾಯಕ್, ಜಂಟಿ ಕಾರ್ಯದರ್ಶಿ ಡಾ. ಶೋಭಾ ಈರಪ್ಪ ಅವರು ಸಹ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News