ಪ್ರಕಾಶಕರ ಸಮ್ಮೇಳನ ಅಧ್ಯಕ್ಷರಾಗಿ ಟಿ.ಎಸ್. ಛಾಯಾಪತಿ ಆಯ್ಕೆ
Update: 2022-02-17 22:00 IST
ಬೆಂಗಳೂರು, ಫೆ.17: ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2021-22ನೇ ಸಾಲಿನ ಕನ್ನಡ ಪುಸ್ತಕ ಪ್ರಾಧಿಕಾರ ಪ್ರಕಾಶಕರ ಸಮ್ಮೇಳನವನ್ನು ಆಯೋಜಿಸುತ್ತಿದ್ದು, ಸಮ್ಮೇಳನದ ಅಧ್ಯಕ್ಷರಾಗಿ ತಳುಕಿನ ವೆಂಕಣ್ಣಯ್ಯ ಗ್ರಂಥಮಾಲೆಯ ಟಿ.ಎಸ್.ಛಾಯಾಪತಿ ಆಯ್ಕೆಯಾಗಿದ್ದಾರೆ.
ಸಮ್ಮೇಳನವು ಮಾರ್ಚ್ ಎರಡನೆಯ ವಾರದಲ್ಲಿ ಮೈಸೂರಿನಲ್ಲಿ ನಡೆಯಲಿದ್ದು, ಸಮ್ಮೇಳನದ ಅಂಗವಾಗಿ ಆರು ದಿನಗಳ ಕಾಲ ರಿಯಾಯಿತಿ ದರದಲ್ಲಿ ಕನ್ನಡ ಪುಸ್ತಕ ಮಾರಾಟ ಮೇಳವನ್ನು ಆಯೋಜಿಸಲಾಗುವುದು ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ. ಎಂ.ಎನ್. ನಂದೀಶ್ ಹಂಚೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.