ಕವಿ ಕಣವಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಸಂತಾಪ
Update: 2022-02-17 22:19 IST
ಬೆಂಗಳೂರು, ಫೆ.17: ಕೇಂದ್ರ ಸಾಹಿತ್ಯ ಅಕಾಡೆಮಿ ವತಿಯಿಂದ ನಗರದ ಸೆಂಟ್ರಲ್ ಕಾಲೇಜು ಆವರಣದಲ್ಲಿರುವ ಸಾಹಿತ್ಯ ಅಕಾಡೆಮಿಯ ಕಚೇರಿಯಲ್ಲಿ ಬುಧವಾರದಂದು ನಿಧನರಾದ ಹಿರಿಯ ಕವಿ ನಾಡೋಜ ಚೆನ್ನವೀರ ಕಣವಿಗೆ ಶ್ರದ್ಧಾಂಜಲಿ ಸಲ್ಲಿಸಲು ಸಭೆಯನ್ನು ಆಯೋಜಿಸಲಾಗಿತ್ತು.
ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಚಂದ್ರಶೇಖರ ಕಂಬಾರ, ವಿಮರ್ಶಕ ಎಸ್.ಆರ್. ವಿಜಯಶಂಕರ ಹಾಗೂ ಪ್ರಾದೇಶಿಕ ಕಾರ್ಯದರ್ಶಿ ಎಸ್.ಪಿ. ಮಹಾಲಿಂಗೇಶ್ವರ ಸೇರಿದಂತೆ ಇತರರು ಕವಿಗೆ ಶ್ರದ್ಧಾಂಜಲಿಯನ್ನು ಸಲ್ಲಿಸಿದರು.