×
Ad

ʼನೀವು ಕೋರ್ಟ್‌ ಆದೇಶವನ್ನು ತಪ್ಪಾಗಿ ಅರ್ಥೈಸುತ್ತಿದ್ದೀರಿʼ: ಪ್ರಾಂಶುಪಾಲರನ್ನು ತರಾಟೆಗೆಳೆದ ಪತ್ರಕರ್ತೆ

Update: 2022-02-17 22:24 IST

ರಾಜ್ಯದ ಕೆಲವು ಶಾಲಾ-ಕಾಲೇಜುಗಳಲ್ಲಿ ಕಳೆದ ಕೆಲವು ದಿನಗಳಿಂದ ಹಿಜಾಬ್‌ ಧರಿಸಿದ ವಿದ್ಯಾರ್ಥಿನಿಯರಿಗೆ ತರಗತಿಯೊಳಗೆ ಪ್ರವೇಶ ನಿರಾಕರಿಸಲಾಗುತ್ತಿದೆ. ಹೈಕೋರ್ಟಿನ ಮಧ್ಯಂತರ ಆದೇಶವನ್ನು ಉಲ್ಲೇಖಿಸಿ ಶಾಲಾ ಕಾಲೇಜು ಮುಖ್ಯಸ್ಥರು ಮಕ್ಕಳನ್ನು ತರಗತಿಗೆ ಪ್ರವೇಶಿಸಲು ಅನುವು ಮಾಡಿಕೊಡುತ್ತಿಲ್ಲ. ಇದನ್ನು ಪ್ರಶ್ನಿಸಿದ ಪತ್ರಕರ್ತೆಯೊಬ್ಬರ ವಿಡಿಯೋ ಈಗ ವೈರಲ್‌ ಆಗುತ್ತಿದೆ.

ಇಂಡಿಯಾ ಟುಡೆ ಪತ್ರಕರ್ತೆ ನಬೀಲಾ ಜಮಾಲ್‌, ಮಕ್ಕಳನ್ನು ಹಿಂದಕ್ಕೆ ಕಳುಹಿಸಿದ ಪ್ರಾಂಶುಪಾಲರನ್ನು ತರಾಟೆಗೆ ಎಳೆದಿದ್ದು, ನಿಮಗೆ ಮಕ್ಕಳ ಶಿಕ್ಷಣದ ಬಗ್ಗೆ, ಅವರ ಭವಿಷ್ಯದ ಬಗ್ಗೆ ಕಳವಳ ಇಲ್ಲವೇ ಎಂದು ಪ್ರಶ್ನಿಸಿದ್ದಾರೆ. ಅಲ್ಲದೆ, ನೀವು ಕೋರ್ಟ್‌ ಮಧ್ಯಂತರ ಆದೇಶವನ್ನು ತಪ್ಪಾಗಿ ಅರ್ಥೈಸುತ್ತಿದ್ದೀರ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News