ಸಕಲೇಶಪುರ: ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಆಗ್ರಹಿಸಿ ಕರವೇ ಪ್ರತಿಭಟನೆ

Update: 2022-02-18 17:46 GMT

ಸಕಲೇಶಪುರ:  ಕಾಡಾನೆ ಸಮಸ್ಯೆ ಶಾಶ್ವತವಾಗಿ ಬಗೆಹರಿಸಿ ಎಂದು ಒತ್ತಾಯಿಸಿ, ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಸಕಲೇಶಪುರದಲ್ಲಿ ರಸ್ತೆತಡೆಡೆಸಿ ಹಾಗೂ ಅರಣ್ಯ ಇಲಾಖೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.

ಪಟ್ಟಣದ ಉಪವಿಭಾಗಾಧಿಕಾರಿ ಕಚೇರಿ ಮುಂಭಾಗ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಬರಬೇಕೆಂದು ಪಟ್ಟುಹಿಡಿದರು. ಅರಣ್ಯ ಇಲಾಖೆ ಅಧಿಕಾರಿಗಳಿಗೆ ಬಾರದಿದ್ದಾಗ ಅರಣ್ಯ ಇಲಾಖೆಗೆ ತೆರಳಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು  ಈ ಸಂದರ್ಭದಲ್ಲಿ ಮಾತನಾಡಿದ  ಹೋರಾಟಗಾರ ಎಡೆಹಳ್ಳಿ ಮಂಜುನಾಥ್, ಕಾಡಾನೆ ಸಮಸ್ಯೆ ಪರಿಹಾರದತ್ತ ಅಧಿಕಾರಿಗಳು ಮತ್ತು ರಾಜಕಾರಣಿಗಳು ನಿರ್ಲಕ್ಷ್ಯ ತೋರುತ್ತಿದ್ದಾರೆ ಯಾವುದೇ  ಯೋಜನೆ ರೂಪಿಸಿಲ್ಲ  ಎಂದು ದೂರಿದರು. 

ಮನುಷ್ಯನ ಪ್ರಾಣಕ್ಕೆ ಇಲ್ಲಿ ಬೆಲೆಯೇ ಇಲ್ಲದಂತಾಗಿದೆ ಇಷ್ಟೊಂದು ನಿರ್ಲಕ್ಷ  ಖಂಡನೆಯ ಹಾಗೂ ಅನಾಗರಿಕತೆ ಎಂದು ಹೇಳಿದರು 

ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ದಿನೇಶ್ , ನಾಗರೀಕ ಸಂರಕ್ಷಣಾ  ಸಮಿತಿಯ  ವೇಣು ಭಾರತೀಯ ಸೇರಿದಂತೆ ಅನೇಕರು ಉಪಸ್ಥಿತರಿದ್ದರು 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News