×
Ad

ಹಿಜಾಬ್ ವಿಚಾರ: ಪ್ರತಿಭಟನಾನಿರತ 15 ಮಂದಿ ಕಾಲೇಜು ವಿದ್ಯಾರ್ಥಿನಿಯರ ವಿರುದ್ಧ ಎಫ್‌ಐಆರ್

Update: 2022-02-18 23:21 IST
ಸಾಂದರ್ಭಿಕ ಚಿತ್ರ

ತುಮಕೂರು: ಸೆಕ್ಷನ್ 144 ಉಲ್ಲಂಘಿಸಿದ ಆರೋಪದಲ್ಲಿ ತುಮಕೂರಿನ ಎಂಪ್ರೆಸ್ ಕಾಲೇಜು ವಿದ್ಯಾರ್ಥಿನಿಯರ ಮೇಲೆ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.

ಬುಧವಾರ ಹಾಗೂ ಗುರುವಾರ ಎಂಪ್ರೆಸ್ ಕಾಲೇಜಿನ ಆವರಣದಲ್ಲಿ ವಿದ್ಯಾರ್ಥಿನಿಯರು ಹಿಜಾಬ್ ವಿಚಾರವಾಗಿ ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಕಾಲೇಜಿನ ಪ್ರಾಂಶುಪಾಲ ಷಣ್ಮುಖ ಪ್ಪ ಪೊಲೀಸರಿಗೆ ದೂರು ನೀಡಿದ್ದಾರೆ.

ಪ್ರಾಂಶುಪಾಲರು ನೀಡಿದ ದೂರಿನ ಮೇರೆಗೆ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಹೆಸರನ್ನು ಉಲ್ಲೇಖಿಸಿದೇ 15 ವಿದ್ಯಾರ್ಥಿನಿಯರ ಮೇಲೆ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News