×
Ad

ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಖಂಡಿಸಿ 'ವಿಧಾನಸೌಧ ಚಲೋ' ಆರಂಭ

Update: 2022-02-19 10:54 IST

ಬೆಂಗಳೂರು, ಫೆ.19: ಗಣರಾಜ್ಯೋತ್ಸವದ ದಿನದಂದು ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವನ್ನು ತೆರವುಗೊಳಿಸಿ ಅವಮಾನ ಮಾಡಿದ ರಾಯಚೂರು ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಪಾಟೀಲ್ ವಜಾಕ್ಕೆ ಆಗ್ರಹಿಸಿ ಸಂವಿಧಾನ ಸಂರಕ್ಷಣಾ ಮಹಾ ಒಕ್ಕೂಟದ  ಹಮ್ಮಿಕೊಂಡಿದ್ದ 'ವಿಧಾನಸೌಧ ಚಲೋ' ಪಾದಯಾತ್ರೆ ಆರಂಭಗೊಂಡಿದೆ.

ಸಿಟಿ ರೈಲ್ವೆ ನಿಲ್ದಾಣದಿಂದ ಹೊರಡುವ 'ವಿಧಾನಸೌಧ ಚಲೋ' ಆನಂದ ರಾವ್ ವೃತ್ತವಾಗಿ ವಿಧಾನ ಸೌಧಕ್ಕೆ ತಲುಪಲಿದೆ.

ನ್ಯಾ.ಮಲ್ಲಿಕಾರ್ಜುನ ಗೌಡ ಪಾಟೀಲ್ ಅವರನ್ನು ಕೂಡಲೆ ವಜಾ ಮಾಡಬೇಕು. ಅವರ ವಿರುದ್ದ ಎಸ್ಸಿ -ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಲ್ಲಿ ಮೊಕದ್ದಮೆ ದಾಖಲಿಸಬೇಕು. ಎಲ್ಲ ನ್ಯಾಯಾಲಯಗಳಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರ ಕಡ್ಡಾಯವಾಗಿ ಹಾಕಬೇಕು. ನ್ಯಾಯಾಧೀಶರ ನೇಮಕಾತಿಯಲ್ಲಿ ಎಸ್ಸಿ-ಎಸ್ಟಿ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರು ಸೇರಿದಂತೆ ಮಹಿಳೆಯರಿಗೆ ಆದ್ಯತೆ ನೀಡಬೇಕು ಎಂದು ಆಗ್ರಹಿಸಿ ದಲಿತ ಸಂಘಟನೆಗಳ ನೇತೃತ್ವದಲ್ಲಿ 'ವಿಧಾನಸೌಧ ಚಲೋ' ಹಮ್ಮಿಕೊಳ್ಳಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News