ಭಾರತ ತಂಡದ ಟೆಸ್ಟ್‌ ಕ್ರಿಕೆಟ್‌ ನಾಯಕನಾಗಿ ರೋಹಿತ್‌ ಶರ್ಮಾ ಆಯ್ಕೆ

Update: 2022-02-19 11:40 GMT
ರೋಹಿತ್‌ ಶರ್ಮಾ (PTI)

ಮುಂಬೈ: ಶ್ರೀಲಂಕಾ ವಿರುದ್ಧದ ಎರಡು ಟೆಸ್ಟ್‌ ಸರಣಿಗೆ ಮುನ್ನ ಭಾರತದ ಏಕದಿನ ಕ್ರಿಕೆಟ್ ನಾಯಕ ರೋಹಿತ್ ಶರ್ಮಾ ಅವರನ್ನು ನಾಯಕರನ್ನಾಗಿ ಹೆಸರಿಸಲಾಗಿದ್ದು, ಜಸ್ಪ್ರೀತ್ ಬುಮ್ರಾ ಅವರನ್ನು ಉಪನಾಯಕರನ್ನಾಗಿ ನೇಮಿಸಲಾಗಿದೆ. ಫೆಬ್ರವರಿ 24 ರಂದು ಆರಂಭವಾಗಲಿರುವ ಶ್ರೀಲಂಕಾ ವಿರುದ್ಧದ ಮುಂಬರುವ ಟ್ವೆಂಟಿ-20 ಅಂತಾರಾಷ್ಟ್ರೀಯ ಸರಣಿಯಿಂದ ವಿರಾಟ್ ಕೊಹ್ಲಿ ಮತ್ತು ರಿಷಬ್ ಪಂತ್ ಅವರಿಗೆ ವಿಶ್ರಾಂತಿ ನೀಡಲಾಗಿದೆ.

ಅನುಭವಿ ಬ್ಯಾಟರ್ ಗಳಾದ ಚೇತೇಶ್ವರ ಪೂಜಾರ ಮತ್ತು ಅಜಿಂಕ್ಯ ರಹಾನೆ ಅವರನ್ನು ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿ ತಂಡದಿಂದ ಕೈಬಿಡಲಾಗಿದೆ. 

ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಪ್ರಿಯಾಂಕ್ ಪಾಂಚಾಲ್, ಮಯಾಂಕ್ ಅಗರ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ಶುಭಮನ್ ಗಿಲ್, ರಿಷಬ್ ಪಂತ್ (ವಿಕೆಟ್‌ ಕೀಪರ್), ಕೆ.ಎಸ್ ಭರತ್, ರವೀಂದ್ರ ಜಡೇಜಾ, ಜಯಂತ್ ಯಾದವ್, ಆರ್ ಅಶ್ವಿನ್, ಕುಲ್ದೀಪ್ ಯಾದವ್, ಸೌರಭ್ ಕುಮಾರ್, ಮುಹಮ್ಮದ್ ಸಿರಾಜ್, ಉಮೇಶ್ ಯಾದವ್, ಮುಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ (ಉಪನಾಯಕ)

ಟಿ-ಟ್ವೆಂಟಿ ತಂಡ: ರೋಹಿತ್ ಶರ್ಮಾ (ನಾಯಕ), ರುತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್, ಇಶಾನ್ ಕಿಶನ್ (ವಿಕೆಟ್‌ ಕೀಪರ್), ವೆಂಕಟೇಶ್ ಅಯ್ಯರ್, ದೀಪಕ್ ಚಾಹರ್, ದೀಪಕ್ ಹೂಡಾ, ರವೀಂದ್ರ ಜಡೇಜಾ, ಯುಜ್ವೇಂದ್ರ ಚಾಹಲ್, ರವಿ ಬಿಷ್ಣೋಯ್, ಕುಲ್ದೀಪ್ ಯಾದವ್ , ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಜಸ್ಪ್ರೀತ್ ಬುಮ್ರಾ (ಉಪನಾಯಕ), ಅವೇಶ್ ಖಾನ್

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News