ಬೆಂಗಳೂರು: 9.82 ಕೋಟಿ ರೂ. ಮೌಲ್ಯದ ಮಾದಕ ವಸ್ತು ಜಪ್ತಿ, ಇಬ್ಬರು ಆರೋಪಿಗಳ ಬಂಧನ

Update: 2022-02-19 12:13 GMT

ಬೆಂಗಳೂರು: ವಿದೇಶದಿಂದ ಕೊರಿಯರ್ ನಲ್ಲಿ ತರಿಸಿಕೊಂಡಿದ್ದ 9.82 ಕೋಟಿ ರೂ. ಮೌಲ್ಯದ ಮಾದಕ ವಸ್ತವನ್ನು ದೇವನಹಳ್ಳಿ ಅಂತರ್‍ರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿ 7 ಕೋಟಿ ರೂ. ಮೌಲ್ಯದ ಹೆರಾಯಿನ್ ಹಾಗೂ 2.82 ಕೋಟಿ ರೂ. ಮೌಲ್ಯದ ಎಂಡಿಎಂಎ ವಶಕ್ಕೆ ಪಡೆದು ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ.

ವಿದೇಶದಿಂದ ವಿಮಾನ ನಿಲ್ದಾಣಕ್ಕೆ ಬಂದ ಕೊಯರ್ ತಪಾಸಣೆ ನಡೆಸಿದ ಕಸ್ಟಮ್ಸ್ ನ ಕೇಂದ್ರಿಯ ಗುಪ್ತಚರ ಘಟಕದ ಅಧಿಕಾರಿಗಳು ಮಾದಕವಸ್ತುಗಳನ್ನು ಪತ್ತೆ ಹಚ್ಚಿದ್ದಾರೆ. ಈ ಸಂಬಂಧ ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಇದನ್ನೂ ಓದಿ: "ವಿದ್ಯಾರ್ಥಿ‌ನಿ ತಲೆತಿರುಗಿ ಬಿದ್ದರೂ ಒಬ್ಬ ಶಿಕ್ಷಕರೂ ಬಂದಿಲ್ಲ"

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News