×
Ad

ಕಾಸರಗೋಡು: ಬಿಜೆಪಿ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದ ಪಕ್ಷದ ಕಾರ್ಯಕರ್ತರು!

Update: 2022-02-20 15:43 IST

ಕಾಸರಗೋಡು, ಫೆ.20: ಬಿಜೆಪಿ ಕಾಸರಗೋಡು ಜಿಲ್ಲಾ ಕಚೇರಿಗೆ ಪಕ್ಷದ ಕಾರ್ಯಕರ್ತರೇ ಮುತ್ತಿಗೆ ಹಾಕಿ ಬೀಗ ಜಡಿದು ಪ್ರತಿಭಟನೆ ನಡೆಸಿದ ಘಟನೆ ರವಿವಾರ ನಡೆದಿದೆ.

ಕಾರ್ಯಕರ್ತರು ಬಿಜೆಪಿಯ ನಾಯಕತ್ವದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ಈ ಪ್ರತಿಭಟನೆ ನಡೆಸಿದರು.

ಕುಂಬಳೆ ಗ್ರಾಮ ಪಂಚಾಯತ್ ಸ್ಥಾಯಿ ಸಮಿತಿಯ ಚುನಾವಣೆಯಲ್ಲಿ ಬಿಜೆಪಿಯು ಸಿಪಿಎಂ ಜೊತೆ ಪರೋಕ್ಷ ಮೈತ್ರಿ ಮಾಡಿಕೊಂಡಿತ್ತೆನ್ನಲಾಗಿದ್ದು, ಇದು ಕೆಲ ಸಮಯಗಳಿಂದ ಬಿಜೆಪಿಯೊಳಗೆಯೇ ಅಸಮಾಧಾನಕ್ಕೆ ಎಡೆ ಮಾಡಿಕೊಟ್ಟಿತ್ತು. ಇದು ಪಕ್ಷದ ಕಾರ್ಯಕರ್ತರ ಅಸಮಾಧಾನಕ್ಕೆ ಕಾರಣವಾಗಿತ್ತು. ಈ ಬಗ್ಗೆ  ಹಲವು ಬಾರಿ ರಾಜ್ಯ ನಾಯಕತ್ವಕ್ಕೆ ದೂರು ಸಲ್ಲಿಸಿದ್ದರೂ ಪ್ರಯೋಜವಾಗಿಲ್ಲ ಎನ್ನಲಾಗಿದೆ. ಇದಲ್ಲದೆ ಪಕ್ಷಕ್ಕಾಗಿ ದುಡಿದವರನ್ನು ಕಡೆಗಣಿಸಲಾಗುತ್ತಿದೆ ಎಂಬುದು ಕಾರ್ಯಕರ್ತರ ಆರೋಪವಾಗಿದೆ. ಈ ಎಲ್ಲ ಅಸಮಾಧಾನದ ಹಿನ್ನೆಲೆಯಲ್ಲಿ ನೂರರಷ್ಟು  ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದು, ಸಮಸ್ಯೆ ಪರಿಹರಿಸುವ ತನಕ ಹೋರಾಟ ಮುಂದುವರಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News