ಅಶ್ವಿನಿ ಪುನೀತ್ ರಾಜ್ ಕುಮಾರ್ ತಂದೆ ನಿಧನ
Update: 2022-02-20 17:54 IST
ಬೆಂಗಳೂರು: ನಟ ದಿವಂಗತ ಪುನೀತ್ ರಾಜ್ ಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ ಅವರ ತಂದೆ ರೇವನಾಥ್ (78) ರವಿವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ರೇವನಾಥ್ ಅವರು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ ಎಂದು ತಿಳಿದು ಬಂದಿದೆ.
ಮೃತರು ಪತ್ನಿ, ಪುತ್ರಿ ಅಶ್ವಿನಿ ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ.
ರೇವನಾಥ್ ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಭಾಗೆಮನೆಯವರಾಗಿದ್ದು, ಸರಕಾರಿ ಉದ್ಯೋಗದಲ್ಲಿದ್ದ ಅವರು ಬೆಂಗಳೂರಿನ ಮಹಾನಗರ ಪಾಲಿಕೆಯಲ್ಲಿ ಇಂಜಿನಿಯರಾಗಿ ಕಾರ್ಯನಿರ್ವಹಿಸಿ ನಿವೃತ್ತಿ ನಂತರ ಬೆಂಗಳೂರಿನಲ್ಲೇ ನೆಲೆಸಿದ್ದರು.