×
Ad

ಉಡುಪಿ: ‘ಕೇಂದ್ರ ಬಜೆಟ್ ಮತ್ತು ಭಾರತದ ಆರ್ಥಿಕತೆ’ ವಿಚಾರಗೋಷ್ಠಿ

Update: 2022-02-20 18:57 IST

ಉಡುಪಿ, ಫೆ.20: ಉಡುಪಿ ಜಿಲ್ಲಾ ಬಿಜೆಪಿ, ಜಿಲ್ಲಾ ಆರ್ಥಿಕ ಪ್ರಕೋಷ್ಠ ಮತ್ತು ಜಿಲ್ಲಾ ಮಾಧ್ಯಮ ಪ್ರಕೋಷ್ಠಗಳ ಸಂಯುಕ್ತ ಆಶ್ರಯದಲ್ಲಿ ಕೇಂದ್ರ ಬಜೆಟ್ ಮತ್ತು ಭಾರತದ ಆರ್ಥಿಕತೆ’ ವಿಚಾರಗೋಷ್ಠಿಯನ್ನು ಉಡುಪಿಯ ಹೋಟೆಲ್ ಕಿದಿಯೂರ್ನ ಮಾಧವ ಕೃಷ್ಣ ಸಭಾಂಗಣದಲ್ಲಿ ರವಿವಾರ ಆಯೋಜಿಸಲಾಗಿತ್ತು.

ಕಾರ್ಯಕ್ರಮವನ್ನು ಉಡುಪಿ ಶಾಸಕ ಕೆ.ರಘುಪತಿ ಭಟ್ ಉದ್ಘಾಟಿಸಿದರು. ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ರಾಜ್ಯ ಆರ್ಥಿಕ ಪ್ರಕೋಷ್ಠದ ಸಂಚಾಲಕ ಡಾ.ಸಮೀರ್ ಕಗಲ್ಕರ್ ವಿಚಾರಗೋಷ್ಠಿಯನ್ನು ನಡೆಸಿಕೊಟ್ಟರು.

ಬಿಜೆಪಿ ಜಿಲ್ಲಾ ಆರ್ಥಿಕ ಪ್ರಕೋಷ್ಠ ಸಮಿತಿ ಸದಸ್ಯ ಚಿದಾನಂದ ಉಚ್ಚಿಲ್, ಬಿಜೆಪಿ ಜಿಲ್ಲಾ ವಕ್ತಾರ ಗುರುಪ್ರಸಾದ್ ಶೆಟ್ಟಿ ಕಟಪಾಡಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮನೋಹರ್ ಕಲ್ಮಾಡಿ ಮೊದಲಾದವರು ಉಪಸ್ಥಿತರಿದ್ದರು.

ಬಿಜೆಪಿ ಜಿಲ್ಲಾ ಆರ್ಥಿಕ ಪ್ರಕೋಷ್ಠದ ಸಂಚಾಲಕ ದಿವಾಕರ ಶೆಟ್ಟಿ ಪ್ರಾಸ್ತಾವಿಕ ವಾಗಿ ಮಾತನಾಡಿದರು. ಬಿಜೆಪಿ ಜಿಲ್ಲಾ ಮಾಧ್ಯಮ ಪ್ರಕೋಷ್ಠದ ಸಂಚಾಲಕ ಶ್ರೀನಿಧಿ ಹೆಗ್ಡೆ ಹಿರೇಬೆಟ್ಟು ಸ್ವಾಗತಿಸಿದರು. ಬಿಜೆಪಿ ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ ಕಾರ್ಯಕ್ರಮ ನಿರೂಪಿಸಿದರು. ಸತ್ಯಾನಂದ ನಾಯಕ್ ಆತ್ರಾಡಿ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News