ಜನನ, ಮರಣ ನೋಂದಣಾಧಿಕಾರಿಗಳಾಗಿ ಪಿಡಿಒಗಳ ನೇಮಕ
Update: 2022-02-20 21:31 IST
ಬೆಂಗಳೂರು, ಫೆ. 20: ಗ್ರಾಮೀಣ ಪ್ರದೇಶದಲ್ಲಿ ಗ್ರಾಮ ಲೆಕ್ಕಿಗರನ್ನು ಜನನ, ಮರಣ ನೋಂದಣಾಧಿಕಾರಿಗಳನ್ನಾಗಿ ನೇಮಕ ಮಾಡಿರುವುದನ್ನು ಮಾರ್ಪಡಿಸಿ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳನ್ನು ಜನನ, ಮರಣ ನೋಂದಣಾಧಿಕಾರಿಗಳನ್ನಾಗಿ ಹಾಗೂ ಗ್ರಾಮಗಳ ಗ್ರಾಮ ಲೆಕ್ಕಿಗರನ್ನು ಜನನ, ಮರಣ ಉಪ ನೋಂದಣಾಧಿಕಾರಿಗಳನ್ನಾಗಿ ನೇಮಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.