ಬೊಂಡಾಲ ಜನಾರ್ದನ ಶೆಟ್ಟಿ, ರಾಮಣ್ಣ ಶೆಟ್ಟಿ ಸಂಸ್ಮರಣೆ - ಪ್ರಶಸ್ತಿ ಪ್ರದಾನ
ಮಂಗಳೂರು, ಫೆ.20: ಶೈಲಿಬದ್ಧ ಭಾಗವತಿಕೆಯ ಮೂರು ಮಜಲುಗಳನ್ನು ಕಂಡ ಬಲಿಪ ಪರಂಪರೆ ಹಾಗೂ ಯಕ್ಷಾಂಬಿಕೆಯ ಸೇವೆಯಲ್ಲಿ ತಲೆಮಾರಿನ ಸಂಪ್ರದಾಯವನ್ನು ಶ್ರದ್ಧೆಯಿಂದ ಆಚರಿಸುತ್ತಿರುವ ಬೊಂಡಾಲ ಕುಟುಂಬ ಯಕ್ಷಗಾನದ ನೈಜ ಆರಾಧಕರು. ಇವೆರಡೂ ಯಕ್ಷಗಾನ ಕಲಾವಿದರು ಮತ್ತು ಕಲಾಪೋಷಕ ವಲಯದ ಸರ್ವ ಶ್ರೇಷ್ಠ ಮಾದರಿಗಳು’ ಎಂದು ಯಕ್ಷಗಾನ ವಿದ್ವಾಂಸ ಹಾಗೂ ಅರ್ಥದಾರಿ ಡಾ.ಎಂ.ಪ್ರಭಾಕರ ಜೋಶಿ ಹೇಳಿದ್ದಾರೆ.
ಬೊಂಡಾಲ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಶಂಭೂರು ಗ್ರಾಮದ ಬೊಂಡಾಲದಲ್ಲಿ ಜರಗಿದ ಕಟೀಲು ಶ್ರೀ ದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿಯ ಎರಡು ದಿನಗಳ ಹರಕೆ ಬಯಲಾಟದ ವೇದಿಕೆಯಲ್ಲಿ ಇತ್ತೀಚೆಗೆ ನಡೆದ ದಿ.ಬೊಂಡಾಲ ಜನಾರ್ದನ ಶೆಟ್ಟಿ ಮತ್ತು ಬೊಂಡಾಲ ರಾಮಣ್ಣ ಶೆಟ್ಟಿ ಸಂಸ್ಮರಣೆ ಹಾಗೂ ಬೊಂಡಾಲ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು.
ಬಲಿಪ ಪ್ರಸಾದರಿಗೆ ಪ್ರಶಸ್ತಿ: ಈ ಸಂದರ್ಭ ಭಾಗವತ ಬಲಿಪ ಪ್ರಸಾದ ಭಟ್ಟರಿಗೆ ಮಾಜಿ ಸಚಿವ ಬಿ.ರಮಾನಾಥ ರೈ 2021-22 ನೇ ಸಾಲಿನ ಬೊಂಡಾಲ ಪ್ರಶಸ್ತಿ ನೀಡಿ ಗೌರವಿಸಿದರು. ಕಟೀಲು ಕ್ಷೇತ್ರದ ಅರ್ಚಕ ವೇದಮೂರ್ತಿ ಅನಂತಪದ್ಮನಾಭ ಆಸ್ರಣ್ಣ ಆಶೀರ್ವಚನ ನೀಡಿದರು. ಪ್ರಶಸ್ತಿ ಆಯ್ಕೆ ಸಮಿತಿಯ ಸಂಚಾಲಕ ಮತ್ತು ಯಕ್ಷಗಾನ ಅರ್ಥದಾರಿ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ ಸಂಸ್ಮರಣಾ ಭಾಷಣ ಮಾಡಿದರು.
ಬೊಂಡಾಲ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಮತ್ತು ದುರ್ಗಾ ಫೆಸಿಲಿಟೀಸ್ ಸಂಸ್ಥೆಯ ಮುಖ್ಯಸ್ಥ ಬೊಂಡಾಲ ಸಚ್ಚಿದಾನಂದ ಶೆಟ್ಟಿ ಸ್ವಾಗತಿಸಿದರು. ಶಿಕ್ಷಕ ನಾರಾಯಣಗೌಡ ಸನ್ಮಾನ ಪತ್ರ ವಾಚಿಸಿದರು. ಟ್ರಸ್ಟಿನ ಗೌರವಾಧ್ಯಕ್ಷ ಬೊಂಡಾಲ ಸೀತಾರಾಮ ಶೆಟ್ಟಿ ವಂದಿಸಿ