ಬಜರಂಗದಳ ಕಾರ್ಯಕರ್ತನ ಹತ್ಯೆ ಹಿನ್ನೆಲೆ: ಶಿವಮೊಗ್ಗ ನಗರದಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್
Update: 2022-02-21 11:39 IST
ಶಿವಮೊಗ್ಗ: ರವಿವಾರ ರಾತ್ರಿ ಭಜರಂಗದಳ ಕಾರ್ಯಕರ್ತ ಹರ್ಷ ಎಂಬ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರವಿವಾರ ತಡರಾತ್ರಿ ನಗರದ ಕೆಲವೆಡೆ ಕಲ್ಲು ತೂರಾಟ,ಲಾಠಿ ಚಾರ್ಜ್,ವಾಹನಗಳ ಸುಟ್ಟ ಪ್ರಕರಣಗಳು ನಡೆದಿದ್ದವು.ಹಾಗಾಗಿ ಯಾವುದೇ ರೀತಿಯ ಅಹಿತಕರ ಘಟನೆಗಳು ಆಗದಂತೆ ತಡೆಗಟ್ಟಲು ನಗರದೆಲ್ಲೆಡೆ 144 ಸೆಕ್ಷನ್ ಜಾರಿ ಮಾಡಿದ್ದು ನಗರದ ಪ್ರಮುಖ ವೃತ್ತಗಳಲ್ಲಿ RAF,DAR,KSRP ತುಕಡಿಗಳನ್ನು ನಿಯೋಜಿಸಲಾಗಿದೆ.
ನಗರದ ಶಾಲಾ ಕಾಲೇಜುಗಳಿಗೆ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಿಸಿಲಾಗಿದೆ.ಅಲ್ಲದೇ ಪ್ರಮುಖ ವೃತ್ತಗಳಲ್ಲಿ ಪೊಲೀಸರು ವಾಹನ ತಪಾಸಣೆ ಮಾಡುತ್ತಿದ್ದಾರೆ.
ಒಟ್ಟಾರೆ ಶಿವಮೊಗ್ಗ ಕಾದ ಕಾವಲಿಯಂತಾಗಿದ್ದು,ಶಾಂತಿ ಕದಡದಂತೆ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡುತ್ತಿದ್ದಾರೆ.