ಕೇಂದ್ರ ಸಚಿವರ ಪುತ್ರನಿಗೆ ಜಾಮೀನು ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಅರ್ಜಿ
Update: 2022-02-21 13:45 IST
ಹೊಸದಿಲ್ಲಿ: ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಹಾಗೂ ಪ್ರಕರಣದ ಪ್ರಮುಖ ಆರೋಪಿ ಆಶಿಶ್ ಮಿಶ್ರಾಗೆ ಹೈಕೋರ್ಟ್ ಇತ್ತೀಚೆಗೆ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಹತ್ಯೆಗೀಡಾದ ರೈತರ ಕುಟುಂಬ ಸದಸ್ಯರು ಸುಪ್ರೀಂಕೋರ್ಟ್‌ನಲ್ಲಿ ಹೊಸ ಅರ್ಜಿ ಸಲ್ಲಿಸಿದ್ದಾರೆ ಎಂದು NDTV ವರದಿ ಮಾಡಿದೆ.
ಸಚಿವರ ಪುತ್ರನ ವಿರುದ್ಧ ಅಗಾಧ ಸಾಕ್ಷ್ಯಾಧಾರಗಳ ಹೊರತಾಗಿಯೂ ಅಲಹಾಬಾದ್ ಹೈಕೋರ್ಟ್ ಜಾಮೀನು ನೀಡಿದೆ ಎಂದು ವಕೀಲ ಪ್ರಶಾಂತ್ ಭೂಷಣ್ ಅವರ ಮೂಲಕ ಸಲ್ಲಿಸಿದ ಮನವಿಯಲ್ಲಿ ತಿಳಿಸಲಾಗಿದೆ.