ಶಾಲಾ ಕಾಲೇಜುಗಳ ಸಮವಸ್ತ್ರ ನೀತಿಗೆ ವಿದ್ಯಾರ್ಥಿಗಳು ಬದ್ಧರಾಗಬೇಕು: ಹಿಜಾಬ್ ಪ್ರಕರಣದ ಕುರಿತು ಅಮಿತ್ ಶಾ

Update: 2022-02-21 11:13 GMT
ಕೇಂದ್ರ ಗೃಹ ಸಚಿವ ಅಮಿತ್ ಶಾ (PTI)

ಹೊಸದಿಲ್ಲಿ: ವಿದ್ಯಾರ್ಥಿಗಳು, ಅವರು ಯಾವುದೇ ಧರ್ಮದವರಾಗಿರಲಿ ಅವರವರ ಶಾಲಾ ಕಾಲೇಜುಗಳು ನಿಗದಿಪಡಿಸಿದ ಸಮವಸ್ತ್ರ ನೀತಿಯನ್ನು ಅನುಸರಿಸಬೇಕು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ, ಎಂದು ಕರ್ನಾಟಕದಲ್ಲಿ ಭುಗಿಲೆದ್ದಿರುವ ಹಿಜಾಬ್ ಪ್ರಕರಣದ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರತಿಕ್ರಿಯಿಸಿದ್ದಾರೆ.

ಆಂಗ್ಲ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನವೊಂದರಲ್ಲಿ ಮಾತನಾಡಿದ ಅವರು ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಧರ್ಮಾತೀತರಾಗಿರಬೇಕು ಎಂದು ಹೇಳಿದರು.

"ಪ್ರಕರಣ ನ್ಯಾಯಾಲಯದಲ್ಲಿದೆ ಹಾಗೂ ನ್ಯಾಯಾಲಯದ ನಿರ್ಧಾರವನ್ನು ಎಲ್ಲರೂ ಒಪ್ಪಬೇಕು. ನನ್ನ ವೈಯಕ್ತಿಕ ಅಭಿಪ್ರಾಯ ನ್ಯಾಯಾಲಯ ತೀರ್ಪು ನೀಡುವ ತನಕ ಇರಲಿದೆ, ಆದರೆ ಕೋರ್ಟ್ ತೀರ್ಪಿನ ನಂತರ ನಾನು ಕೂಡ ಅದನ್ನು ಒಪ್ಪಿಕೊಳ್ಳಬೇಕು,''ಎಂದು ಅವರು ಹೇಳಿದರು.

ಈ ವಿವಾದಕ್ಕೆ ರಾಜಕೀಯ ಬಣ್ಣ ನೀಡಲೆತ್ನಿಸುವವರು ಯಶಸ್ವಿಯಾಗುವುದಿಲ್ಲ, ಎಂದು ಅವರು ಹೇಳಿದರು.

ಇದನ್ನೂ ಓದಿ: ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತನ ಶವಯಾತ್ರೆ ವೇಳೆ ಹಿಂಸಾಚಾರ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News