×
Ad

ಶಿವಮೊಗ್ಗದ ಹರ್ಷ ಕೊಲೆ ದುರದೃಷ್ಟಕರ: ಶಾಸಕ ರಿಝ್ವಾನ್ ಅರ್ಶದ್

Update: 2022-02-21 18:10 IST
ರಿಝ್ವಾನ್ ಅರ್ಶದ್

ಬೆಂಗಳೂರು, ಫೆ.21: ನಿನ್ನೆ ಶಿವಮೊಗ್ಗದಲ್ಲಿ ಹರ್ಷ ಎಂಬ ಯುವಕನ ಕೊಲೆಯಾಗಿರುವುದು ಅತ್ಯಂತ ದುರದೃಷ್ಟಕರ. ಸರಕಾರ ಕೂಡಲೇ ಕ್ರಮ ಕೈಗೊಂಡು ಆರೋಪಿಗಳನ್ನು ಬಂಧಿಸಬೇಕು ಎಂದು ಶಾಸಕ ರಿಝ್ವಾನ್ ಅರ್ಶದ್ ಆಗ್ರಹಿಸಿದ್ದಾರೆ.

ಈ ಸಂಬಂಧ ಟ್ವೀಟ್‌ಗಳನ್ನು ಮಾಡಿರುವ ಅವರು, ನಾನು ಎಲ್ಲರಿಗೂ, ವಿಶೇಷವಾಗಿ ಯುವಕರು ಪ್ರಚೋದನೆಗೆ ಒಳಗಾಗಬೇಡಿ ಎಂದು ಮನವಿ ಮಾಡುತ್ತೇನೆ. ಪೊಲೀಸರು ಆರೋಪಿಗಳನ್ನು ಶೀಘ್ರವೆ ಹಿಡಿಯಲಿ ಎಂದು ಕೋರಿದ್ದಾರೆ.

ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡುವುದು ಸರಕಾರ ಮತ್ತು ಆಡಳಿತ ಪಕ್ಷದ ಆದ್ಯ ಕರ್ತವ್ಯವಾಗಿದೆ. ಈಗಾಗಲೇ ಪರಿಸ್ಥಿತಿ ಉದ್ವಿಗ್ನವಾಗಿರುವಾಗ ಸರಕಾರ/ಬಿಜೆಪಿ ತನ್ನ ಕಾರ್ಯಕರ್ತರಿಗೆ ಮೆರವಣಿಗೆ ನಡೆಸಲು ಮತ್ತು ಕಾನೂನನ್ನು ತಮ್ಮ ಕೈಗೆ ತೆಗೆದುಕೊಳ್ಳಲು ಅವಕಾಶ ನೀಡಬಾರದು ಎಂದು ರಿಝ್ವಾನ್ ಅರ್ಶದ್ ಆಗ್ರಹಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News