ಕಾಂಗ್ರೆಸ್‍ನ ಆಂತರಿಕ ಕಲಹ ಹೆಚ್ಚಳ: ನಳಿನ್‍ಕುಮಾರ್ ಕಟೀಲ್

Update: 2022-02-21 17:26 GMT

ಬೆಂಗಳೂರು, ಫೆ.21: ಸಿದ್ದರಾಮಯ್ಯರಲ್ಲಿದ್ದ ಸಮಾಜವಾದಿ ಚಿಂತನೆಗಳು ಹೊರಗೆ ಹೋಗಿವೆ. ಅಧಿಕಾರವಾದಿ ಚಿಂತನೆಗಳು ಒಳಗೆ ಬಂದಿವೆ. ಕಾಂಗ್ರೆಸ್‍ನಲ್ಲಿ ಅಧಿಕಾರವಾದಿ ಸಿದ್ದರಾಮಣ್ಣ ಮತ್ತು ಕಾಂಗ್ರೆಸ್‍ವಾದಿ ಡಿ.ಕೆ.ಶಿವಕುಮಾರ್ ನಡುವೆ ಆಂತರಿಕ ಕಲಹಗಳು ಹೆಚ್ಚಾಗಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

ಸೋಮವಾರ ನಗರದ ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಜಾಬ್ ಬಗ್ಗೆ ಅಧಿವೇಶನದಲ್ಲಿ ಮಾತು ಬರಬಾರದೆಂಬ ಕಾರಣಕ್ಕಾಗಿ ಧರಣಿ ನಡೆಸಲಾಗುತ್ತಿದೆ. ಹಿಜಾಬ್ ಪರ-ವಿರೋಧ ಮಾತನಾಡಿದರೆ ಕಾಂಗ್ರೆಸ್ ಮೈನಸ್ ಆಗುವ ಭಯ ಕಾಂಗ್ರೆಸಿಗರಲ್ಲಿದೆ ಎಂದು ವ್ಯಂಗ್ಯವಾಡಿದರು.

ಕಾಂಗ್ರೆಸ್ ಆಡಳಿತದಲ್ಲಿ 24 ಹಿಂದೂಗಳ ಹತ್ಯೆ ಆಗಿದ್ದಾಗ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ಯಾಕೆ ರಾಜೀನಾಮೆ ಕೊಟ್ಟಿಲ್ಲ? ಡಿವೈಎಸ್ಪಿ ಗಣಪತಿ ಅವರು ಜಾರ್ಜ್ ಅವರ ಹೆಸರು ಬರೆದು ಆತ್ಮಹತ್ಯೆ ಮಾಡಿಕೊಂಡಾಗ ಯಾಕೆ ಜಾರ್ಜ್ ರಾಜೀನಾಮೆ ನೀಡಿಲ್ಲ? ನಿಮ್ಮ ಝಮೀರ್ ಮೇಲೆ ಎಫ್‍ಐಆರ್ ಆಗಿರುವಾಗ ನೀವೇಕೆ ಅವರ ರಾಜೀನಾಮೆ ಪಡೆಯುತ್ತಿಲ್ಲ? ಈಶ್ವರಪ್ಪ, ಆರಗ ಜ್ಞಾನೇಂದ್ರ ಅವರ ರಾಜೀನಾಮೆ ಕೇಳುವ ನೀವು ನಿಮ್ಮ ಶಾಸಕರ ರಾಜೀನಾಮೆಯನ್ನೇಕೆ ಪಡೆಯುತ್ತಿಲ್ಲ ಎಂದು ನಳಿನ್ ಕುಮಾರ್ ಕಟೀಲ್ ಪ್ರಶ್ನಿಸಿದರು.

ಶಿವಮೊಗ್ಗದಲ್ಲಿ ನಡೆದ ಬಜರಂಗದಳದ ಕಾರ್ಯಕರ್ತ ಹರ್ಷ ಅವರ ಹತ್ಯೆಯನ್ನು ಖಂಡಿಸಿದ ಅವರು, ಇದರ ಹಿಂದಿರುವ ಯಾವುದೇ ಶಕ್ತಿಗಳನ್ನು ಪತ್ತೆ ಹಚ್ಚಿ ಆರೋಪಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News