×
Ad

ಮಲ್ಪೆ: ಹಿಜಾಬ್ ಪ್ರಕರಣದಲ್ಲಿ ಕೋರ್ಟ್ ಮೆಟ್ಟಿಲೇರಿರುವ ವಿದ್ಯಾರ್ಥಿನಿಯ ತಂದೆಯ ಹೋಟೆಲ್ ಮೇಲೆ ದಾಳಿ, ಸಹೋದರನಿಗೆ ಹಲ್ಲೆ

Update: 2022-02-21 23:26 IST
ಗಾಯಾಳು ಸೈಫ್

ಮಲ್ಪೆ: ಹಿಜಾಬ್ ಸಂಬಂಧ ಹೈಕೋರ್ಟ್ ಮೆಟ್ಟಿಲೇರಿರುವ ವಿದ್ಯಾರ್ಥಿನಿಯೊಬ್ಬಳ ತಂದೆಯ ಹೋಟೆಲಿಗೆ ಕಲ್ಲು ತೂರಾಟ ನಡೆಸಿ, ಸಹೋದರನಿಗೆ ಹಲ್ಲೆಗೈದಿರುವ ಘಟನೆ ಸೋಮವಾರ ರಾತ್ರಿ 9:30ರ ಸುಮಾರಿಗೆ ಮಲ್ಪೆಯಲ್ಲಿ ನಡೆದಿದೆ.

ಮಲ್ಪೆ ಪೇಟೆಯಲ್ಲಿರುವ ಹೈದರ್ ಅಲಿ ಎಂವಬರ ಬಿಸ್ಮಿಲ್ಲಾ ಹೋಟೆಲ್ ಗೆ ಆಗಮಿಸಿದ 70 -100 ಮಂದಿ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆನ್ನಲಾಗಿದೆ. ಇದರಿಂದ ಹೋಟೆಲಿನ ಗಾಜುಗಳು ಪುಡಿಯಾಗಿದ್ದು, ಅಪಾರ ಹಾನಿ ಸಂಭವಿಸಿದೆ ಎಂದು ತಿಳಿದು ಬಂದಿದೆ. ಬಳಿಕ ದುಷ್ಕರ್ಮಿಗಳು ಹೊಟೇಲ್ ನಲ್ಲಿ‌ ಇದ್ದ ಅವರ ಮಗ ಸೈಪ್(20) ಎಂಬವರಿಗೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಹಲ್ಲೆಗೆ ಒಳಗಾಗಿರುವ ಸೈಫ್ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ಸ್ಥಳಕ್ಕೆ ಮಲ್ಪೆ ಪೊಲೀಸರು ಆಗಮಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News