ಹನೂರು: ರಾಜ್ಯ ಹೆದ್ದಾರಿಯಲ್ಲಿ ಚಿರತೆಯ ಕಳೇಬರ ಪತ್ತೆ
Update: 2022-02-22 10:27 IST
ಹನೂರು, ಫೆ.22: ಬಿಳಿಗಿರಿ ರಂಗನಾಥಸ್ವಾಮಿ ದೇವಾಲಯ(ಬಿಆರ್‌ಟಿ)ದ ಹುಲಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಗೆ ಬರುವ, ಹನೂರು ತಾಲೂಕಿನ ಗುರುಮಲ್ಲಪ್ಪನದೊಡ್ಡಿ ಗ್ರಾಮದ ರಸ್ತೆಯಲ್ಲಿ ಮಂಗಳವಾರ ಬೆಳಗ್ಗೆ ಗಂಡು ಚಿರತೆಯೊಂದರ ಕಳೇಬರ ಪತ್ತೆಯಾಗಿದ್ದು, ಸೋಮವಾರ ರಾತ್ರಿ ವಾಹನ ಢಿಕ್ಕಿ ಹೊಡೆದಿರುವ ಸಾಧ್ಯತೆ ಇದೆ.
ಲೊಕ್ಕನಹಳ್ಳಿಯಿಂದ ತಮಿಳುನಾಡಿನ ಸತ್ಯ ಮಂಗಲಕ್ಕೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿಯಲ್ಲಿ ಚಿರತೆಯ ಕಳೇಬರ ಪತ್ತೆಯಾಗಿದೆ. ರಸ್ತೆಯಲ್ಲಿ ಚಿರತೆ ಸತ್ತು ಬಿದ್ದಿರುವುದನ್ನು ಕಂಡ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.