ಪೊಲೀಸರು ನೊಟೀಸ್ ಸಹ ನೀಡದೆ ನನ್ನ ಪತಿಯನ್ನು ಅಪಹರಿಸಿದ್ದಾರೆ: ನಟ ಚೇತನ್ ಪತ್ನಿ ಮೇಘ ಆರೋಪ

Update: 2022-02-22 12:20 GMT

ಬೆಂಗಳೂರು: ಸಾಮಾಜಿಕ ಕಾರ್ಯಕರ್ತ ಹಾಗೂ ನಟ ಚೇತನ್‌ರನ್ನು ಪೊಲೀಸರು ಯಾವುದೇ ಮಾಹಿತಿ ನೀಡದೆ, ನೋಟಿಸ್ ನೀಡದೇ ಅಪಹರಿಸಿದ್ದಾರೆ ಎಂದು ಚೇತನ್ ಪತ್ನಿ ಮೇಘ ಆರೋಪಿಸಿದ್ದಾರೆ.

ಈ ಬಗ್ಗೆ ಬೆಂಗಳೂರಿನ ಶೇ‍ಷಾದ್ರಿಪುರಂ ಪೊಲೀಸ್ ಠಾಣೆ ಎದುರು ಫೇಸ್‌ಬುಕ್‌ ಲೈವ್‌ನಲ್ಲಿ ಮಾಹಿತಿ ನೀಡಿರುವ ಮೇಘ ಅವರು, ಇಂದು ನಾನು ಮನೆಯಲ್ಲಿದ್ದೆ ಮಧ್ಯಾಹ್ನ 3 ಗಂಟೆಯಿಂದ ನನ್ನ ಪತಿ ಚೇತನ್ ಕಾಣುತ್ತಿಲ್ಲ, ಬಳಿಕ  ನಮ್ಮ ಮನೆಯಲ್ಲಿ ಕೆಲಸ ಮಾಡುವವರು ಪೊಲೀಸರು ಕರೆದುಕೊಂಡು ಹೋಗಿರುವುದಾಗಿ ತಿಳಿಸಿದರು.

ಆದರೆ ಈ ಕುರಿತು ಪೊಲೀಸರು ಯಾವುದೇ ಮಾಹಿತಿ ನೀಡುತ್ತಿಲ್ಲ. ಚೇತನ್ ಅವರ ಮೊಬೈಲ್ ಕೂಡ ಸ್ವಿಚ್ ಆಫ್ ಆಗಿದೆ ಎಂದು  ಆತಂಕ  ವ್ಯಕ್ತಪಡಿಸಿದ್ದಾರೆ.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News