×
Ad

ಬಜರಂಗದಳ ಕಾರ್ಯಕರ್ತನ ಹತ್ಯೆ ಪ್ರಕರಣ: ಆರು ಮಂದಿಯ ಬಂಧನ

Update: 2022-02-22 18:45 IST

ಶಿವಮೊಗ್ಗ, ಫೆ.22: ಬಜರಂಗದಳ ಕಾರ್ಯಕರ್ತ ಹರ್ಷನ ಕೊಲೆ ಸಂಬಂಧ ಆರು ಮಂದಿಯನ್ನು ಬಂಧಿಸಲಾಗಿದೆ. ನಾಲ್ಕು ಜನ ಹರ್ಷನ ಮೇಲೆ ದಾಳಿ ಮಾಡಿ ಹಲ್ಲೆ ಮಾಡಿದ್ದಾರೆ. ಇಬ್ಬರು ಆರೋಪಿಗಳು ಅವರಿಗೆ ಸಹಕಾರ ನೀಡಿರುವ ಬಗ್ಗೆ ಮಾಹಿತಿ ಇದೆ. ಹೆಚ್ಚಿನ ತನಿಖೆಯಲ್ಲಿ ವಿಚಾರಣೆಯಿಂದ ಇನ್ನಷ್ಟು ಮಾಹಿತಿ ಸಿಗಲಿದೆ ಎಂದು ಎಸ್ಪಿ ಬಿ.ಎಂ ಲಕ್ಷ್ಮೀಪ್ರಸಾದ್ ಹೇಳಿದ್ದಾರೆ.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಹಮ್ಮದ್ ಖಾಸಿಫ್, ನದೀಮ್, ಆಸಿಫ್ ಉಲ್ಲಾಖಾನ್, ರಿಹಾನ್, ನಿಹಾನ್, ಅಫ್ನಾನ್ ಬಂಧಿತ ಆರೋಪಿಗಳಾಗಿದ್ದಾರೆ.

ನಗರದಲ್ಲಿ ಸಧ್ಯಕ್ಕೆ ಪರಿಸ್ಥಿತಿ ಹತೋಟಿಯಲ್ಲಿದೆ. ಮಂಗಳವಾರ ಎರಡು ಆಟೋ ಮತ್ತು ಬೈಕ್‌ಗಳಿಗೆ ಯಾರೊ ದುಷ್ಕರ್ಮಿಗಳು ಬೆಂಕಿ ಹಾಕಿದ್ದಾರೆ. ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.

ಕೊಲೆ ಆರೋಪಿಗಳು ಎಲ್ಲರೂ ಶಿವಮೊಗ್ಗದವರೇ ಆಗಿದ್ದಾರೆ. ಪ್ರಕರಣದಲ್ಲಿ ಸುಮಾರು 18 ಮಂದಿಯನನ್ನು ವಶಕ್ಕೆ ಪಡೆದಿದ್ದು, ಅಂತಿಮವಾಗಿ ಆರು ಮಂದಿಯನ್ನು ಬಂಧಿಸಿದ್ದೇವೆ.ಆರೋಪಿಗಳಲ್ಲಿ ನಾಲ್ಕು ಮಂದಿ ಹಿಂದೆಯೂ ವಿವಿಧ ಪ್ರಕರಣಗಳಲ್ಲಿ ಭಾಗಿಯಾದವರೇ ಎಂದು ಅವರು ಹೇಳಿದರು.

ಕರ್ಫ್ಯೂ ವಿಸ್ತರಣೆ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಶಿವಮೊಗ್ಗ ಜಿಲ್ಲೆಯಾದ್ಯಂತ ಇನ್ನೆರಡು ದಿನ ಕರ್ಫ್ಯೂ ವಿಸ್ತರಣೆ ಮಾಡಲಾಗಿದೆ. ಬಧವಾರದವರೆಗೆ ಕರ್ಫ್ಯೂ ವಿಧಿಸಲಾಗಿತ್ತು. ಆದರೆ ಕೆಲವು ಅಹಿತಕರ ಘಟನೆ ನಡೆದ ಹಿನ್ನಲೆಯಲ್ಲಿ ಶುಕ್ರವಾರದವರೆಗೆ ಕರ್ಫ್ಯೂ ವಿಸ್ತರಣೆ ಮಾಡಲಾಗುತ್ತಿದೆ.  ಕರ್ಫ್ಯೂ ಜಾರಿಯಲ್ಲಿರುವ ಅವಧಿಯಲ್ಲಿ ಶಾಲೆ,ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.ಇನ್ನೂ,ನಗರ ವ್ಯಾಪ್ತಿಯಲ್ಲಿ ಅಗತ್ಯ ವಸ್ತುಗಳ  ಖರೀದಿಗೆ ಬೆಳಿಗ್ಗೆ 6ರಿಂದ 9 ಗಂಟೆಯವರೆಗೆ ಅವಕಾಶ ಕಲ್ಪಿಸಲಾಗುತ್ತಿದೆ. ದೊಡ್ಡಪೇಟೆ ಮತ್ತು ತುಂಗಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೂಕ್ಷ್ಮ ಪ್ರದೇಶ ಎಂದು ಗುರುತಿಸಲಾಗಿದೆ. 

-ಜಿಲ್ಲಾಧಿಕಾರಿ ಡಾ.ಕೆ. ಸೆಲ್ವಮಣಿ 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News