ವಿದ್ಯಾರ್ಥಿನಿಯ ಸಹೋದರನಿಗೆ ಹಲ್ಲೆ: ಕಠಿಣ ಕ್ರಮಕ್ಕೆ ಎಸ್‌ಡಿಪಿಐ ಒತ್ತಾಯ
ಉಡುಪಿ, ಫೆ.22: ತಮ್ಮ ಸಾಂವಿಧಾನಿಕ ಹಕ್ಕಿಗಾಗಿ ನ್ಯಾಯಾಲಯಕ್ಕೆ ರಿಟ್ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿನಿಯ ತಂದೆಯ ಹೋಟೆಲಿಗೆ ಸಂಘಪರಿವಾರದ ವರು ದಾಳಿ ಮಾಡಿ, ಆಕೆಯ ಸಹೋದರನ ಮೇಲೆ ಹಲ್ಲೆ ಮಾಡಿರುವ ಕೃತ್ಯವನ್ನು ಎಸ್‌ಡಿಪಿಐ ಉಡುಪಿ ಜಿಲ್ಲಾ ಸಮಿತಿ ಖಂಡಿಸಿದೆ.
ಕೆಲವು ದಿನಗಳ ಹಿಂದೆ ವಿದ್ಯಾರ್ಥಿನಿಯರ ವೈಯಕ್ತಿಕ ಮಾಹಿತಿಗಳನ್ನು ಕಾಲೇಜು ಆಡಳಿತ ಮಂಡಳಿ ಸೋರಿಕೆ ಮಾಡಿತ್ತು. ತದನಂತರ ನಿರಂತರವಾಗಿ ವಿದ್ಯಾರ್ಥಿನಿಯರಿಗೆ ಬೆದರಿಕೆಗಳು ಬರುತ್ತಿದ್ದವು. ಅಲ್ಲದೆ ಈ ಸಂಬಂಧ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ ಬಿಜೆಪಿಯ ಸ್ಥಳೀಯ ನಾಯಕರುಗಳ ಪ್ರೇರಣೆಯಿಂದ ಒಂದು ಗುಂಪು ಕಾನೂನು ಕೈಗೆತ್ತಿಕೊಂಡು ಹೋಟೆಲ್ಗೆ ದಾಳಿ ಮಾಡಿ ಹಲ್ಲೆ ನಡೆಸಿ, ಕೊಲೆ ಬೆದರಿಕೆಯೊಡ್ಡಿದೆಂದು ಎಸ್‌ಡಿಪಿಐ ಆರೋಪಿಸಿದೆ.
ಈ ಕೃತ್ಯದಲ್ಲಿ ಬಾಗಿಯಾದವರ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿ ದಾಳಿ ಮಾಡಲು ಪ್ರೇರೇಪಿಸಿದ ಬಿಜೆಪಿ ನಾಯಕರನ್ನು ತನಿಖೆಗೆ ಒಳಪಡಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಎಸ್‌ಡಿಪಿಐ ಜಿಲ್ಲಾ ಉಪಾಧ್ಯಕ್ಷ ಶಾಹಿದ್ ಅಲಿ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.