×
Ad

ತುಮಕೂರು: ನಿಂತಿದ್ದ ಖಾಸಗಿ ಬಸ್ ಗೆ ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ; ಹಲವರಿಗೆ ಗಾಯ

Update: 2022-02-23 15:11 IST

ತುಮಕೂರು.ಫೆ.23: ಬುಧವಾರ ಬೆಳಗ್ಗೆ ರಸ್ತೆ ಬದಿ ನಿಂತಿದ್ದ ಖಾಸಗಿ ಬಸ್ ಗೆ ಕೆಎಸ್ಸಾರ್ಟಿಸಿ ಬಸ್ ಹಿಂಬದಿಯಿಂದ ಗುದ್ದಿದ ಪರಿಣಾಮ ಪ್ರಯಾಣಿಕರಿಗೆ ಗಂಭೀರ ಗಾಯಗಳಾದ ಘಟನೆ ತುಮಕೂರು ಬೆಂಗಳೂರಿನ ರಾಷ್ಟ್ರೀಯ ಹೆದ್ದಾರಿಯ ಹಿರೇಹಳ್ಳಿ ಬಳಿ ನಡೆದಿದೆ.

ಖಾಸಗಿ ಬಸ್ಸಿನ ಡ್ರೈವರ್ ರಸ್ತೆಬದಿಯಲ್ಲಿ ಬಸ್ ನಿಲ್ಲಿಸಿ  ತಿಂಡಿ ತಿನ್ನಲು ತೆರಳಿದ್ದ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ.

ಬೆಂಗಳೂರು- ತುಮಕೂರು ಮಾರ್ಗವಾಗಿ ಬರುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಖಾಸಗಿ ಬಸ್ಸಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಎಂಟಕ್ಕೂ ಅಧಿಕ ಮಂದಿ ಗಾಯಗಳಾಗಿ ತುಮಕೂರು ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಘಟನೆಯಲ್ಲಿ ಪ್ರಯಾಣಿಕರೋರ್ವರ  ಎರಡು ಕಾಲುಗಳು ಮುರಿದಿದ್ದು ಇತರ ಗಾಯಾಳುಗಳಿಗೆ ತುಮಕೂರಿನ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ.

ಕ್ಯಾತ್ಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಸ್ಥಳಕ್ಕೆ ಭೇಟಿ ನೀಡಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News