ಉಡುಪಿ: ಬುಧವಾರ 15 ಮಂದಿಗೆ ಕೋವಿಡ್ ಸೋಂಕು ದೃಢ

Update: 2022-02-23 13:19 GMT
ಸಾಂದರ್ಭಿಕ ಚಿತ್ರ

ಉಡುಪಿ, ಫೆ.23: ಜಿಲ್ಲೆಯಲ್ಲಿ ಬುಧವಾರವೂ 15 ಮಂದಿಯಲ್ಲಿ ಕೊರೋನ ಸೋಂಕು ದೃಢಪಟ್ಟಿದೆ. ದಿನದಲ್ಲಿ 21ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದು, ಸದ್ಯ ಜಿಲ್ಲೆಯಲ್ಲಿ ಚಿಕಿತ್ಸೆಯಲ್ಲಿರುವವರ ಸಂಖ್ಯೆ 135ಕ್ಕಿಳಿದಿದೆ. 

ಇಂದು ಪಾಸಿಟಿವ್ ಬಂದ 15 ಮಂದಿಯಲ್ಲಿ ನಾಲ್ವರು ಪುರುಷರು ಹಾಗೂ ಉಳಿದ ಎಂಟು ಮಂದಿ ಮಹಿಳೆಯರು. ಇವರಲ್ಲಿ 9 ಮಂದಿ ಉಡುಪಿ ತಾಲೂಕಿಗೆ, ನಾಲ್ವರು ಕುಂದಾಪುರ ಹಾಗೂ ಒಬ್ಬರು ಕಾರ್ಕಳ ತಾಲೂಕಿಗೆ ಸೇರಿದವರು. ಉಳಿದೊಬ್ಬರು ಹೊರಜಿಲ್ಲೆಯವರು. ಪಾಸಿಟಿವ್ ಬಂದವರಲ್ಲಿ 23 ಮಂದಿ ಈಗ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ.

ಮಂಗಳವಾರ 21 ಮಂದಿ ರೋಗಮುಕ್ತರಾಗಿದ್ದು, ಕೊರೋನದಿಂದ ಜ.1ರ ನಂತರ ಚೇತರಿಸಿಕೊಂಡವರ ಸಂಖ್ಯೆ 18306ಕ್ಕೇರಿದೆ. ನಿನ್ನೆ ಜಿಲ್ಲೆಯ ಒಟ್ಟು 1159 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಜ.1ರ ಬಳಿಕ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ 18,348ಕ್ಕೇರಿದೆ.

5470 ಮಂದಿಗೆ ಲಸಿಕೆ:

ಜಿಲ್ಲೆಯಲ್ಲಿ ಇಂದು ಒಟ್ಟು 5470 ಮಂದಿ ಕೋವಿಡ್‌ಗಿರುವ ಲಸಿಕೆಯನ್ನು ಪಡೆದಿದ್ದಾರೆ. ಇವರಲ್ಲಿ 704 ಮಂದಿ ಹಿರಿಯ ನಾಗರಿಕರು ಸೇರಿದಂತೆ ಒಟ್ಟು 754 ಮಂದಿ ಮುನ್ನೆಚ್ಚರಿಕೆಯ ಒಂದು ಡೋಸ್ ಲಸಿಕೆಯನ್ನು ಪಡೆದಿದ್ದಾರೆ. ಉಳಿದಂತೆ 112 ಮಂದಿ ಮೊದಲ ಡೋಸ್ ಹಾಗೂ 4604 ಮಂದಿ ಎರಡನೇ ಡೋಸ್ ಲಸಿಕೆ ಪಡೆದಿದ್ದಾರೆ. 15ರಿಂದ 18 ವರ್ಷ ದೊಳಗಿನ 45 ಮಂದಿ ಮೊದಲ ಡೋಸ್ ಹಾಗೂ 2743 ಮಂದಿ ಎರಡನೇ ಡೋಸ್‌ನ್ನು ಇಂದು ಪಡೆದುಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News