×
Ad

ಉಡುಪಿ: ಚರ್ಮ ಕುಶಲಕರ್ಮಿಗಳಿಗೆ ಕೌಶಲ್ಯ ಅಭಿವೃದ್ಧಿ ತರಬೇತಿ ಕಾರ್ಯಾಗಾರ

Update: 2022-02-23 19:58 IST

ಉಡುಪಿ, ಫೆ.22:ನಗರದ ಆದಿಉಡುಪಿಯ ಡಾ.ಬಿ.ಆರ್ ಅಂಬೇಡ್ಕರ್ ಸಮುದಾಯ ಭವನದಲ್ಲಿ ಸೋಮವಾರ ಡಾ.ಬಾಬು ಜಗಜೀವನ್ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ವತಿಯಿಂದ ಚರ್ಮ ಕುಶಲಕರ್ಮಿಗಳಿಗೆ 60 ದಿನಗಳ ಕೌಶಲ್ಯ ಅಭಿವೃದ್ಧಿ ತರಬೇತಿ ಕಾರ್ಯಾಗಾರ ಉದ್ಘಾಟನೆಗೊಂಡಿತು.

ಕಾರ್ಯಾಗಾರವನ್ನು ಉದ್ಘಾಟಿಸಿದ ನಗರಸಭಾ ಸದಸ್ಯೆ ಸವಿತಾ ಹರೀಶ್ ರಾಮ್ ಮಾತನಾಡಿ, ಲಿಡ್‌ಕರ್ ನಿಗಮವು ಸಮಾಜದ ಕಟ್ಟಕಡೆಯ ವ್ಯಕ್ತಿಯ ಅಭಿವೃದ್ಧಿಗೆ, ಅವರ ಆರ್ಥಿಕ ಸಬಲೀಕರಣಕ್ಕೆ ಕೌಶಲ್ಯ ತರಬೇತಿ ಕಾರ್ಯಾಗಾರವನ್ನು ರೂಪಿಸಿದ್ದು, ಎಲ್ಲರೂ ತರಬೇತಿಯ ಪ್ರಯೋಜನ ಪಡೆದು ಆರ್ಥಿಕವಾಗಿ ಸಬಲರಾಗಬೇಕು ಎಂದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ದಲಿತ ಸಂಘರ್ಷ ಸಮಿತಿಯ ಸಂಚಾಲಕ ಸುಂದರ್ ಮಾಸ್ಟರ್ ಮಾತನಾಡಿ, ವಿದ್ಯಾರ್ಜನೆ ಮತ್ತು ಸಂಘಟನೆಯಿಂದ ಉತ್ತಮ ಜೀವನ ನಿರ್ವಹಣೆ ಸಾಧ್ಯ. ನಿಗಮವು ನೀಡುವ ಯೋಜನೆ ಗಳನ್ನು ಸದ್ಬಳಕೆ ಮಾಡಿಕೊಂಡು ಸಮಾಜದ ಮೇಲ್ಪಂಕ್ತಿಗೆ ಬನ್ನಿ ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ನಿವೃತ್ತ ಅರಣ್ಯಾಧಿಕಾರಿ ರಘುನಾಥ ನಾಯ್ಕ್, ಕುಶಲ ಕರ್ಮಿಗಳ ಮುಖಂಡ ಕೃಷ್ಣ ಉಪಸ್ಥಿತರಿದ್ದರು. ಜಿಲ್ಲಾ ಸಂಯೋಜಕ ಸಿ.ದಯಾನಂದ್ ಪ್ರಾಸ್ತಾವಿಕವಾಗಿ ಮಾತನಾಡಿದರು. ತಿಪ್ಪೇಸ್ವಾಮಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News