×
Ad

ಮೈಸೂರು: ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆ ಮೇಲೆ ದಾಳಿ; ಮಹಿಳೆಯ ಬಂಧನ

Update: 2022-02-23 20:19 IST
ಸಾಂದರ್ಭಿಕ ಚಿತ್ರ

ಮೈಸೂರು,ಫೆ.23: ವೇಶ್ಯಾವಾಟಿಕೆ ದಂಧೆಯನ್ನು ನಡೆಸುತ್ತಿದ್ದ ಮಹಿಳೆಯೋರ್ವರನ್ನು ಪೊಲೀಸರು ಬಂಧಿಸಿದ್ದಾರೆ. 

ನಗರದ ವಿಜಯನಗರದ 4ನೇ ಹಂತದ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದು,  ಮಹಿಳೆಯರನ್ನು ಇಟ್ಟುಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದ ಒಬ್ಬ ಮಹಿಳೆಯನ್ನು ಬಂಧಿಸಿ ಇಬ್ಬರು ಮಹಿಳೆಯರನ್ನು ರಕ್ಷಿಸಿದ್ದಾರೆ. 

ವೇಶ್ಯವಾಟಿಕೆಗೆ ಬಳಕೆಯಾಗಿದ್ದ 31,500 ರೂ ನಗದು ಒಂದು ಮೊಬೈಲ್ ಫೋನ್, ಒಂದು ದ್ವಿಚಕ್ರವಾಹನವನ್ನು ವಶಕ್ಕೆ ಪಡೆದಿದ್ದಾರೆ.  ಈ ಸಂಬಂಧ ವಿಜಯನಗರ ಪಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಡಿಸಿಪಿ ಗೀತಾ ಪ್ರಸನ್ನ ಹಾಗು ಸಿಸಿಬಿ ಎಸಿಪಿ ಸಿ.ಕೆ.ಅಶ್ವಥನಾರಾಯಣ ಅವರ ಮಾರ್ಗದರ್ಶನದಲ್ಲಿ ಸಿಸಿಬಿ ಇನ್ಸ್‍ಪೆಕ್ಟರ್ ಎ.ಮಲ್ಲೆಶ್, ಜೋಸೆಫ್ ನೋರೋನ, ಮಮತ, ಕೆ.ಜಿ.ಶ್ರೀನಿವಾಸ್ ದಾಳಿ ನಡೆಸಿದ್ದಾರೆ.  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News