ಹಾಸನದಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ

Update: 2022-02-24 10:30 GMT
ಸತ್ಯಪ್ರಸಾದ್                                              ಗೌರವ್

ಹಾಸನ: ಒಂದೇ ಕುಟುಂಬದ ಮೂವರು ಸಾಮೂಹಿಕ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಹಾಸನ ನಗರದ ಹೇಮಾವತಿ ನಗರದಲ್ಲಿ ನಡೆದಿದೆ.

ಇಲ್ಲಿನ ಪೆನ್ಷನ್ ಮೊಹಲ್ಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು,  ಅಪ್ಪ ಅಮ್ಮ ಹಾಗೂ ಮಗ ವಿಷ ಸೇವಿಸಿ ಸಾವಿಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ.

ಮೃತರನ್ನು ಸತ್ಯಪ್ರಸಾದ್ (54)ಅನ್ನಪೂರ್ಣ(50) ಹಾಗು ಗೌರವ್(21) ಎಂದು ಗುರುತಿಸಲಾಗಿದೆ. ಮೃತದೇಹಗಳನ್ನು ಹಾಸನದ ವೈದ್ಯಕೀಯ ಆಸ್ಪತ್ರೆಗೆ ಸ್ಥಳಾಂತರಮಾಡಲಾಗಿದೆ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಪೊಲೀಸರ ಬೇಟಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿ ತನಿಕೆ ನಡೆಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News