ಮಧ್ಯಂತರ ಆದೇಶ ತಪ್ಪಾಗಿ ಅರ್ಥೈಸುತ್ತಿರುವ ಶಿಕ್ಷಣ ಸಂಸ್ಥೆಗಳು: ರಾಜ್ಯಪಾಲರ ಮಧ್ಯಪ್ರವೇಶಕ್ಕೆ ಎಸ್ಸೆಸೆಫ್ ಆಗ್ರಹ

Update: 2022-02-24 13:30 GMT

ಭಟ್ಕಳ: ಹಿಜಾಬ್ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟಿನ ಮಧ್ಯಂತರ ಆದೇಶವನ್ನು ತಪ್ಪಾಗಿ ಅರ್ಥೈಸಿ ಅದನ್ನು ಬಲವಂತವಾಗಿ ಅನುಷ್ಟಾನಗೊಳಿಸುತ್ತಿರುವದನ್ನು ವಿರೋಧಿಸಿದ ಸುನ್ನಿ ಸ್ಟೂಡೆಂಟ್ಸ್ ಫೆಡರೇಷನ್ (ಎಸ್ಸೆಸೆಫ್) ಸಂಘಟನೆ ಭಟ್ಕಳದ ತಹಸಿಲ್ದಾರರ ಮೂಲಕ ರಾಜ್ಯಪಾಲರಿಗೆ ಮನವಿಯನ್ನು ಅರ್ಪಿಸಿತು.

ಹಿಜಾಬ್ ವಿಚಾರಕ್ಕೆ ಸಂಬಂದಿಸಿದಂತೆ ನ್ಯಾಯಾಲಯದ ಮಧ್ಯಂತರ ಆದೇಶವನ್ನು ತಪ್ಪಾಗಿ ಅರ್ಥೈಸಿಕೊಂಡಿರುವ ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿ ಹಾಗೂ ಪಾಲಕರಲ್ಲಿ ಗೊಂದಲ ಸೃಷ್ಟಿಸುತ್ತಿವೆ. ಇದರಿಂದಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯ ಡೋಲಾಯಮಾನವಾಗಿದ್ದು ರಾಜ್ಯಪಾಲರು ಮಧ್ಯಪ್ರವೇಶಿಸುವುದರ ಮೂಲಕ ಶಿಕ್ಷಣ ಸಂಸ್ಥೆಗಳನ್ನು ನಿಯಂತ್ರಿಸಬೇಕೆಂದು ಎಸ್ಸೆಸೆಫ್ ಮನವಿಯಲ್ಲಿ ತಿಳಿಸಿದೆ. 

ಹೈಕೋರ್ಟ್ ನೀಡಿದ ಮಧ್ಯಂತರ ಆದೇಶ ಪದವಿ ಕಾಲೇಜುಗಳಿಗೆ ಅನ್ವಯಿಸುವುದಿಲ್ಲ ಎಂದು ಉನ್ನತ ಶಿಕ್ಷಣ ರಾಜ್ಯ ಸಚಿವ ಡಾ.ಅಶ್ವತ್ ನಾರಾಯಣ್ ಸ್ಪಷ್ಟಪಡಿಸಿದ್ದಾರೆ ಎಂದು ಜ್ಞಾಪಕ ಪತ್ರದಲ್ಲಿ ತಿಳಿಸಲಾಗಿದೆ. ಆದರೆ ಮಧ್ಯಂತರ ಆದೇಶದ ನೆಪದಲ್ಲಿ ಕೆಲ ಪಟ್ಟಭದ್ರ ಹಿತಾಸಕ್ತಿಗಳು ಶಿಕ್ಷಣ ಇಲಾಖೆ ಮೇಲೆ ಒತ್ತಡ ಹೇರಿ ಎಲ್ಲೆಂದರಲ್ಲಿ ಜಾರಿ ಮಾಡುವಂತೆ ಒತ್ತಾಯಿಸುತ್ತಿದ್ದಾರೆ. ಪೊಲೀಸ್ ಅಧಿಕಾರಿಗಳು ತಮ್ಮ ಸಮವಸ್ತ್ರದಲ್ಲಿ ಸಾಂವಿಧಾನಿಕ ಹಕ್ಕುಗಳನ್ನು ಉಲ್ಲಂಘಿಸಿ ಶಾಲಾ-ಕಾಲೇಜುಗಳನ್ನು ತಲುಪುತ್ತಾರೆ ಮತ್ತು ಮಹಿಳಾ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗೆ ತಮ್ಮ ಹಿಜಾಬ್ ಅನ್ನು ತೆಗೆದುಹಾಕಲು ಸೂಚಿಸುವ ವರದಿಗಳನ್ನು ಬರುತ್ತಿವೆ. ಈ ವಿಷಯದಲ್ಲಿ ಮಾನ್ಯ ರಾಜ್ಯಪಾಲರು ಮಧ್ಯಪ್ರವೇಶಿಸಿ ಹೈಕೋರ್ಟ್‍ನ ಮಧ್ಯಂತರ ಆದೇಶವನ್ನು ಅಧಿಕಾರಿಗಳಿಗೆ ವಿವರಿಸಬೇಕೆಂದು ನಾವು ವಿನಂತಿಸುತ್ತೇವೆ. ಮತ್ತು ಮಹಿಳಾ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಯನ್ನು ಅವರ ಹಿಜಾಬ್ ಅನ್ನು ತೆಗೆದುಹಾಕಲು ಒತ್ತಾಯಿಸಬೇಡಿ ಎಂದು ಮನವಿ ಪತ್ರದಲ್ಲಿ ಸರ್ಕಾರವನ್ನು ಆಗ್ರಹಿಸಿದ್ದಾರೆ.  

ಈ ಸಂದರ್ಭದಲ್ಲಿ ಆರೀಫ್ ಅಸಾದಿ, ಅಬ್ದುಲ್ ಅಲೀಂ ಗವಾಯಿ, ಮುನೀರ್ ಶೇಖ್, ಇದ್ರೀಸ್ ಸೇರಿದಂತೆ ಅನೇಕ ಎಸ್ಸೆಸೆಫ್ ಕಾರ್ಯಕರ್ತರು ಉಪಸ್ಥಿತರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News