×
Ad

ದಿಲ್ಲಿಯಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ರಾಜ್ಯ ಕಾಂಗ್ರೆಸ್ ನಾಯಕರ ಸಭೆ

Update: 2022-02-24 20:22 IST
ಕಾಂಗ್ರೆಸ್ ನಾಯಕರ ಸಭೆ 

ಹೊಸದಿಲ್ಲಿ: ದೆಹಲಿಯಲ್ಲಿ ರಾಹುಲ್ ಗಾಂಧಿ ಅಧ್ಯಕ್ಷತೆಯಲ್ಲಿ ರಾಜ್ಯದ ಹಿರಿಯ ನಾಯಕರ ಸಭೆ ನಡೆಯಿತು.

ಗುರುವಾರ ನಡೆದ ಸಭೆ ಸುಮಾರು ಎರಡು ಗಂಟೆಗೆ ಮುಕ್ತಾಯಗೊಂಡಿದೆ. 

ಸಭೆಯಲ್ಲಿ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ರಾಜ್ಯಸಭೆಯ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ. ವೇಣುಗೋಪಾಲ, ರಣದೀಪ್ ಸಿಂಗ್ ಸುರ್ಜೆವಾಲ, ವಿಧಾನಸಭೆಯ ವಿರೋಧ ಪಕ್ಷದ ಉಪನಾಯಕ ಯು.ಟಿ ಖಾದರ್, ವಿಧಾನಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್‌, ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ, ಈಶ್ವರ್‌ ಖಂಡ್ರೆ, ಸತೀಶ್‌ ಜಾರಕಿಹೊಳಿ, ಧ್ರುವನಾರಾಯಣ್‌, ಸಲೀಂ ಅಹ್ಮದ್‌, ದಿನೇಶ್‌ ಗುಂಡೂರಾವ್‌, ಕೇಂದ್ರದ ಮಾಜಿ ಸಚಿವರಾದ ಕೆ.ಎಚ್ ಮುನಿಯಪ್ಪ, ವೀರಪ್ಪ ಮೊಯ್ಲಿ, ರೆಹಮಾನ್‌ ಖಾನ್‌ ಹಾಗೂ ಮಾಜಿ ಉಪಮುಖ್ಯಮಂತ್ರಿ  ಡಾ.ಜಿ. ಪರಮೇಶ್ವರ್‌ , ಮಾಜಿ ಸಚಿವ ಎಚ್.ಕೆ ಪಾಟೀಲ್ ಭಾಗಿಯಾಗಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News