ಉಕ್ರೇನ್ ನಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ನೋಡಲ್ ಅಧಿಕಾರಿ ನೇಮಕ: ಸಹಾಯವಾಣಿ ಆರಂಭ
Update: 2022-02-24 21:42 IST
ಬೆಂಗಳೂರು, ಫೆ.25: ರಷ್ಯಾ ಹಾಗೂ ಉಕ್ರೇನ್ (Russia-Ukraine) ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಉಕ್ರೇನ್ ನಲ್ಲಿ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ರಾಜ್ಯ ಸರಕಾರವು ಐಎಫ್ಎಸ್ ಅಧಿಕಾರಿ ಹಾಗೂ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತ ಡಾ.ಮನೋಜ್ ರಾಜನ್ ಅವರನ್ನು ನೋಡಲ್ ಅಧಿಕಾರಿಯಾಗಿ ನೇಮಿಸಿದೆ.
ನೋಡಲ್ ಅಧಿಕಾರಿಯ ಸಹಾಯ ವಾಣಿ (080-1070, 080-22350676, ಇಮೇಲ್ ಐಡಿ: manoarya@gmail.com, revenuedmkar@gmail.com ಯು 24/7 ರಾಜ್ಯ ತುರ್ತು ನಿರ್ವಹಣಾ ಕೇಂದ್ರದಲ್ಲಿ ಕಾರ್ಯ ನಿರ್ವಹಿಸಲಿದೆ ಎಂದು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ತುಷಾರ್ ಗಿರಿನಾಥ್ ಅಧಿಸೂಚನೆ ಹೊರಡಿಸಿದ್ದಾರೆ.