ಪ್ರತಿಭಟನೆ ಸಂದರ್ಭ ತಲವಾರು ಝಳಪಿಸಿದ ಬಿಜೆಪಿ ನಾಯಕನ ವೀಡಿಯೊ ವೈರಲ್: ಎಫ್ಐಆರ್ ದಾಖಲು

Update: 2022-02-24 18:13 GMT

ಮುಂಬೈ, ಫೆ. 24: ಪ್ರತಿಭಟನೆ ಸಂದರ್ಭ ತಲವಾರು ಝಳಪಿಸಿದ ಹಾಗೂ ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದ ಆರೋಪದಲ್ಲಿ ಬಿಜೆಪಿಯ ಮುಂಬೈ ಯುವ ಘಟಕದ ಮಾಜಿ ಅಧ್ಯಕ್ಷ ಮೋಹಿತ್ ಕಾಂಬೋಜ್ ವಿರುದ್ಧ ಮುಂಬೈ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. 

ಜಾರಿ ನಿರ್ದೇಶನಾಲಯದ ಹಣ ಅಕ್ರಮ ವರ್ಗಾವಣೆ ಪ್ರಕರಣ ಎದುರಿಸುತ್ತಿರುವ ಎನ್ಸಿಪಿ ನಾಯಕ ಹಾಗೂ ಮಹಾರಾಷ್ಟ್ರ ಸಂಪುಟ ಸಚಿವ ನವಾಬ್ ಮಲಿಕ್ ಅವರನ್ನು ಬಂಧಿಸುವಂತೆ ಆಗ್ರಹಿಸಿ ಆಯೋಜಿಸಲಾಗಿದ್ದ ಪ್ರತಿಭಟನೆ ಸಂದರ್ಭ ಮೋಹಿತ್ ಕಾಂಬೋಜ್ ಅವರು ತಲವಾರು ಝಳಪಿಸಿದ್ದ ವೀಡಿಯೊ ಬುಧವಾರ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು. 

ಮಲಿಕ್ ಅವರ ಬಂಧನದ ಹಿನ್ನೆಲೆಯಲ್ಲಿ ಪಶ್ಚಿಮ ಉಪ ನಗರದ ಸಾಂತಾ ಕ್ರೂಝ್ನ ಕಾಂಬೋಜ್ನಲ್ಲಿರುವ ಅವರ ನಿವಾಸದ ಹೊರಗೆ ಬಿಜೆಪಿಯ ಕೆಲವು ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮ ಆಚರಿಸಿದ್ದರು. ವೀಡಿಯೊ ಬೆಳಕಿಗೆ ಬಂದ ಕೂಡಲೇ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ ಬುಧವಾರ ರಾತ್ರಿ ಕಾಂಬೋಜ್ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News