×
Ad

ಹರ್ಷ ಕೊಲೆಗೆ ಬಳಸಿದ್ದು ಬೇರೆ ರಾಜ್ಯದ ಕಾರು: ಎಸ್ಪಿ ಲಕ್ಷ್ಮಿ ಪ್ರಸಾದ್ ಮಾಹಿತಿ

Update: 2022-02-25 15:24 IST

ಶಿವಮೊಗ್ಗ, ಫೆ.25:  ಬಜರಂಗ ದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಹತ್ತು‌ ಮಂದಿಯನ್ನು ಬಂಧಿಸಿದ್ದೇವೆ. ವಶಕ್ಕೆ ಪಡೆದವರ ವಿಚಾರಣೆ ಆರಂಭಿಸುತ್ತೇವೆ. ವಿಚಾರಣೆ ಬಳಿಕ ಬೇರೆ ಈ ಪ್ರಕರಣದಲ್ಲಿ ಯಾರೆಲ್ಲ ಭಾಗಿಯಾಗಿದ್ದಾರೆ ಎಂಬುದು ತಿಳಿಯಲಿದೆ. 14 ದಿನಗಳ ಬಳಿಕ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳುತ್ತೇವೆ ಎಂದು ಶಿವಮೊಗ್ಗ ಎಸ್ಪಿ ಲಕ್ಷ್ಮೀಪ್ರಸಾದ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಹರ್ಷನ ಕೊಲೆಗೆ ಬಳಸಿದ್ದ ಕಾರನ್ನು ಹಾಗೂ ಆರೋಪಿಗಳು ತಪ್ಪಿಸಿಕೊಳ್ಳಲು ಬಳಸಿದ್ದ ಕಾರು ಹಾಗೂ ಬೈಕನ್ನು ವಶಕ್ಕೆ ಪಡೆದಿದ್ದೇವೆ. ಕೊಲೆ ಮಾಡಲು ಬೇರೆ ರಾಜ್ಯದ ಕಾರನ್ನು ಬಳಸಿಕೊಂಡಿದ್ದಾರೆ. ಆ ಕಾರು ಯಾರದ್ದು, ಶಿವಮೊಗ್ಗಕ್ಕೆ ಯಾಕೆ ಬಂತು, ಕಾರಿನ ಮಾಲಕರು ಯಾರು ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದರು.

ವಿಡಿಯೋ ಕಾಲ್ ಮಾಡಿದವರ ಪತ್ತೆ: ಹರ್ಷನ ಮೊಬೈಲ್ ಫೋನ್ ಇದುವರೆಗೆ ಪತ್ತೆಯಾಗಿಲ್ಲ. ಆದರೆ ಆತನಿಗೆ ವೀಡಿಯೋ ಕರೆ ಮಾಡಿದವರನ್ನು ಪತ್ತೆ ಮಾಡಿದ್ದೇವೆ. ಪೊಲೀಸರಿಗೆ ಲಾಂಗ್- ಮಚ್ಚು ತೋರಿಸಿ ಬೆದರಿಕೆ ಹಾಕಿದವರು ಯಾರು ಎಂಬುದೂ ಗೊತ್ತಾಗಿದೆ. ಅವರನ್ನು ಶೀಘ್ರವೇ ಬಂಧಿಸುತ್ತೇವೆ ಎಂದು ಎಸ್ಪಿ ಮಾಹಿತಿ ನೀಡಿದರು.

ಹರ್ಷ ಕೊಲೆ ಪ್ರಕರಣದಲ್ಲಿ ಸಾತು ಆ್ಯಂಡ್ ಗ್ಯಾಂಗ್ ಭಾಗಿಯಾಗಿತ್ತೆ ಎಂಬ ಬಗ್ಗೆ ತನಿಖೆ ನಡೆಸುತಿದ್ದೇವೆ. ಕೊಲೆ ಹಿಂದೆ ಯಾವುದಾದರೂ ಸಂಘಟನೆಗಳಿವೆಯೇ ಎಂಬ ಬಗ್ಗೆಯೂ ತನಿಖೆ ನಡೆಯುತ್ತಿದೆ. ಖಾಸಿಫ್, ಆಸಿಫ್ ಮೇಲೆ ಐದು, ರಿಹಾನ್ ಮೇಲೆ ಮೂರು ಹಾಗೂ ಅಫ್ನಾನ್ ಮೇಲೆ ಎರಡು ಕಾನೂನು ಸುವ್ಯವಸ್ಥೆ ಪ್ರಕರಣಗಳಿವೆ. ಉಳಿದಂತೆ ಇವರ ಮೇಲೆ ಹಲವು ಡಕಾಯಿತಿ, ಕಳ್ಳತನ ಪ್ರಕರಣಗಳು ದಾಖಲಾಗಿವೆ. ಕೊಲೆಯಾದ ಹರ್ಷನ ಮೇಲೆ ರಿಲಿಜಿಯನ್ ಸಂಬಂಧಿಸಿದ ಎರಡು ಕೇಸ್ ಗಳಿದ್ದವು ಎಂದು ಎಸ್ಪಿ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News