×
Ad

ಶಿವಮೊಗ್ಗ ನಗರದಲ್ಲಿ ಕರ್ಪ್ಯೂ ಅವಧಿ ಸಡಿಲಿಕೆ, ಶಾಲಾ ಕಾಲೇಜು ರಜೆ ವಿಸ್ತರಣೆ: ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ

Update: 2022-02-25 17:50 IST

ಶಿವಮೊಗ್ಗ, ಫೆ.25: ಶಿವಮೊಗ್ಗ ನಗರದಲ್ಲಿ ಕರ್ಮ್ಯೂ ಅವಧಿಯಲ್ಲಿ ಸಡಿಲಿಕೆ ಮಾಡಲಾಗಿದ್ದು, ಫೆಬ್ರವರಿ 26 ಶನಿವಾರ ಬೆಳಿಗ್ಗೆ 6ರಿಂದ ಸಂಜೆ 4 ಗಂಟೆವರೆಗೆ ಅಂಗಡಿ ಮುಂಗಟ್ಟುಗಳನ್ನು ತೆರೆಯಲು ಅವಕಾಶ ಕಲ್ಪಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಅವರು ತಿಳಿಸಿದ್ದಾರೆ.

ಶಾಲಾ ಕಾಲೇಜು ರಜೆ ವಿಸ್ತರಣೆ: ಶಿವಮೊಗ್ಗ ನಗರದಲ್ಲಿ ಶನಿವಾರ ಸಹ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಪರಿಸ್ಥಿತಿಯನ್ನು ಅವಲೋಕಿಸಿ ಮುಂದಿನ ಸೋಮವಾರದಿಂದ ಶಾಲಾ ಕಾಲೇಜು ಪುನರಾರಂಭಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

ಸಾರ್ವಜನಿಕರು ಯಾವುದೇ ವದಂತಿಗಳಿಗೆ ಕಿವಿಗೊಡದೆ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಅವರು ಕೋರಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News