×
Ad

ಯಾದಗಿರಿ: ಸೀಮಂತ ಕಾರ್ಯಕ್ರಮದಲ್ಲಿ ಸಿಲಿಂಡರ್ ಸ್ಫೋಟ; ಮಕ್ಕಳು ಸೇರಿ 20ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ

Update: 2022-02-25 18:40 IST

ಯಾದಗಿರಿ: ಸೀಮಂತ ಕಾರ್ಯಕ್ರಮವೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮೂರು ಪುಟ್ಟ ಮಕ್ಕಳು ಸೇರಿದಂತೆ 20 ಮಂದಿ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. 

ಯಾದಗಿರಿ ಜಿಲ್ಲೆಯ ಶಹಪುರ ತಾಲೂಕಿನ ದೋರನಹಳ್ಳಿ ಗ್ರಾಮದ ಸೀಮಂತ ಕಾರ್ಯಕ್ರಮ ನಡೆಯುತ್ತಿದ್ದ ಮನೆಯೊಂದರಲ್ಲಿ ಸಿಲಿಂಡರ್ ಸೋರಿಕೆಯಿಂದ 20ಕ್ಕೂ ಹೆಚ್ಚಿನ ಜನರಿಗೆ ಗಂಭೀರ ಗಾಯಗಳಾಗಿದ್ದು, ಗಾಯಳುಗಳಿಗೆ ಶಹಾಪುರ ತಾಲೂಕು ಆಸ್ಪತ್ರೆಯಲ್ಲಿ ಪ್ರಥಮ ಚಿಕೆತ್ಸೆ ನಿಡಲಾಗಿದೆ. 

ಬಳಿಕ ಗಾಯಗೊಂಡವರಲ್ಲಿ ಬಹುತೇಕರ ಸ್ಥಿತಿ ಗಂಭೀರ ವಾಗಿದ್ದು, ಹೆಚ್ಚಿನ ಚಿಕೆತ್ಸೆಗೆ ಕಲಬುರ್ಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ಜಿಲ್ಲಾ ನೋಡಲ್ ಅಧಿಕಾರಿ ಡಾ.ಭಗವಂತ ಅನವಾರ, ಶಹಾಪುರ ತಹಶೀಲ್ದಾರ್, ತಾಲೂಕು ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ಮಲ್ಲಪ್ಪ ಕಣಜಿಕರ್, ಪಿಎಸ್ಐ, THO ಡಾ. ರಮೇಶ್ ಗುತ್ತೇದಾರ ರವರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News