ಉಡುಪಿ: ಶನಿವಾರ 17 ಮಂದಿಗೆ ಕೊರೋನ ಪಾಸಿಟಿವ್

Update: 2022-02-25 15:56 GMT

ಉಡುಪಿ, ಫೆ.25: ಜಿಲ್ಲೆಯಲ್ಲಿ ಶನಿವಾರ ಒಟ್ಟು 17 ಮಂದಿ ಹೊಸದಾಗಿ ಕೋವಿಡ್-19ಕ್ಕೆ ಪಾಸಿಟಿವ್ ಬಂದಿದ್ದಾರೆ. 19 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದು, ಸದ್ಯ ಜಿಲ್ಲೆಯಲ್ಲಿ ಚಿಕಿತ್ಸೆಯಲ್ಲಿರುವವರ ಸಂಖ್ಯೆ 127 ಆಗಿದೆ. ಇಂದು ಸಹ ಜಿಲ್ಲೆಯಲ್ಲಿ ಕೋವಿಡ್‌ಗೆ ಯಾರೂ ಬಲಿಯಾಗಿಲ್ಲ.

ಶುಕ್ರವಾರ ಪಾಸಿಟಿವ್ ಬಂದ 17 ಮಂದಿಯಲ್ಲಿ 9 ಮಂದಿ ಪುರುಷರು ಹಾಗೂ 8 ಮಂದಿ ಮಹಿಳೆಯರು. ಇವರಲ್ಲಿ 12 ಮಂದಿ ಉಡುಪಿ ತಾಲೂಕಿಗೆ, ಇಬ್ಬರು ಕುಂದಾಪುರ ಹಾಗೂ ಮೂವರು ಕಾರ್ಕಳ ತಾಲೂಕಿಗೆ ಸೇರಿದವರು. ಈವರೆಗೆ ಪಾಸಿಟಿವ್ ಬಂದವರಲ್ಲಿ 20 ಮಂದಿ ಈಗಲೂ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ. ಇವರಲ್ಲಿ ಮೂವರು ವೆಂಟಿಲೇಟರ್ ಹಾಗೂ ಆರು ಮಂದಿ ಐಸಿಯುನಲ್ಲಿದ್ದಾರೆ.

ಗುರುವಾರ 19 ಮಂದಿ ರೋಗಮುಕ್ತರಾಗಿದ್ದು, ಕೊರೋನದಿಂದ ಜ.1ರ ನಂತರ ಚೇತರಿಸಿಕೊಂಡವರ ಸಂಖ್ಯೆ 18346ಕ್ಕೇರಿದೆ. ನಿನ್ನೆ ಜಿಲ್ಲೆಯ ಒಟ್ಟು 1337 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಜ.1ರ ಬಳಿಕ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ 18,380ಕ್ಕೇರಿದೆ.

2355 ಮಂದಿಗೆ ಲಸಿಕೆ : ಜಿಲ್ಲೆಯಲ್ಲಿ ಇಂದು ಒಟ್ಟು 1355 ಮಂದಿ ಕೋವಿಡ್‌ಗಿರುವ ಲಸಿಕೆಯನ್ನು ಪಡೆದಿದ್ದಾರೆ. ಇವರಲ್ಲಿ 477 ಮಂದಿ ಹಿರಿಯ ನಾಗರಿಕರು ಸೇರಿದಂತೆ ಒಟ್ಟು 515 ಮಂದಿ ಮುನ್ನೆಚ್ಚರಿಕೆಯ ಒಂದು ಡೋಸ್ ಲಸಿಕೆಯನ್ನು ಪಡೆದಿದ್ದಾರೆ. ಉಳಿದಂತೆ 67 ಮಂದಿ ಮೊದಲ ಡೋಸ್ ಹಾಗೂ 1773 ಮಂದಿ ಎರಡನೇ ಡೋಸ್ ಲಸಿಕೆ ಪಡೆದಿದ್ದಾರೆ. 15ರಿಂದ 18 ವರ್ಷ ದೊಳಗಿನ 12 ಮಂದಿ ಮೊದಲ ಡೋಸ್ ಹಾಗೂ 649 ಮಂದಿ ಎರಡನೇ ಡೋಸ್‌ನ್ನು ಇಂದು ಪಡೆದುಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News