×
Ad

ಧರ್ಮಸ್ಥಳದಲ್ಲಿ ದಲಿತ ವ್ಯಕ್ತಿಯ ಹತ್ಯೆ ಪ್ರಕರಣ: ಆರೋಪಿಯನ್ನು ಶೀಘ್ರ ಬಂಧಿಸುವಂತೆ ಸಿದ್ದರಾಮಯ್ಯ ಒತ್ತಾಯ

Update: 2022-02-25 21:53 IST

ಬೆಂಗಳೂರು: 'ಧರ್ಮಸ್ಥಳದಲ್ಲಿ ನಡೆದಿರುವ ದಲಿತ ಯುವಕ‌ ದಿನೇಶ್ ಅವರ ಹತ್ಯೆ ಅತ್ಯಂತ ಖಂಡನೀಯ. ಕೊಲೆ ಆರೋಪಿ ಬಜರಂಗ ದಳದ ನಾಯಕ‌ನಾಗಿರುವ ಕಾರಣಕ್ಕೆ ಮೃತನ ಕುಟುಂಬ ಆತಂಕಕ್ಕೀಡಾಗಿದೆ' ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು,  ಪೊಲೀಸರು ರಾಜಕೀಯ ಪ್ರಭಾವಕ್ಕೆ‌‌ ಮಣಿಯದೆ ಕೊಲೆ ಆರೋಪಿಯ‌ನ್ನು ತಕ್ಷಣ ಬಂಧಿಸಬೇಕು ಮತ್ತು ಮೃತ ಯುವಕನ ಕುಟುಂಬಕ್ಕೆ ರಕ್ಷಣೆ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಹಿಂದುಗಳ ರಕ್ಷಣೆಯ ಮಂತ್ರ ಜಪಿಸುತ್ತಿರುವ ಬಿಜೆಪಿ ಪಕ್ಷ ಧರ್ಮಸ್ಥಳದ ದಲಿತ ಯುವಕನ ಹತ್ಯೆಕೋರನ ರಕ್ಷಣೆಗೆ ನಿಂತಿರುವುದು ಆತ್ಮವಂಚನೆಯ ನಡವಳಿಕೆ. ಸಾವಿನ ರಾಜಕೀಯ ಮಾಡಲು ಹೋಗದೆ ಮೃತಯುವಕನ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. 

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News