×
Ad

ಮಂಗಳೂರು: ಕೊಂಕಣಿ ಭವನಕ್ಕೆ ಶಿಲಾನ್ಯಾಸ

Update: 2022-02-26 12:14 IST

ಮಂಗಳೂರು, ಫೆ.26: ನಗರದ ಉರ್ವ ಸ್ಟೋರ್ ಬಳಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡಮಿಯ ಭವನಕ್ಕೆ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನೀಲ್ ಕುಮಾರ್ ಶಿಲಾನ್ಯಾಸ ನೆರವೇರಿಸಿದರು.

ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡಮಿ ಅಧ್ಯಕ್ಷ ಡಾ.ಕೆ.ಜಗದೀಶ್ ಪೈ ಸಭಾ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶಾಸಕ ವೇದವ್ಯಾಸ ಕಾಮತ್, ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್, ಮಂಗಳೂರು ಮೇಯರ್‍ ಪ್ರೇಮಾನಂದ ಶೆಟ್ಟಿ, ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷ ನಿತಿನ್ ಕುಮಾರ್, ತುಳು ಸಾಹಿತ್ಯ ಅಕಾಡಮಿಯ ಅಧ್ಯಕ್ಷ ದಯಾನಂದ್ ಕತ್ತಲ್‍ಸಾರ್, ಮಹಾನಗರ ಪಾಲಿಕೆ ಸದಸ್ಯರಾದ ಗಣೇಶ್ ಕುಲಾಲ್, ಜಯಶ್ರೀ ಹಾಗೂ ಇತರೆ ಗಣ್ಯರು ಹಾಗೂ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News