ಉಕ್ರೇನ್ ನಲ್ಲಿ ಸಿಲುಕಿರುವ ಮಂಡ್ಯ ವಿದ್ಯಾರ್ಥಿಗಳನ್ನು ಕರೆ ತರಲು ಅಗತ್ಯ ಕ್ರಮ: ಸಚಿವ ಕೆ.ಗೋಪಾಲಯ್ಯ

Update: 2022-02-26 07:16 GMT

ಮಂಡ್ಯ, ಫೆ.26: ಯುದ್ಧಪೀಡಿತ ಉಕ್ರೇನ್ ದೇಶದಲ್ಲಿರುವ ಮಂಡ್ಯ ಜಿಲ್ಲೆಯ ನಾಲ್ವರು ವಿದ್ಯಾರ್ಥಿಗಳನ್ನು ಸ್ವದೇಶಕ್ಕೆ ಸುರಕ್ಷಿತವಾಗಿ ಕರೆ ತರುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಮತ್ತು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲಾಧಿಕಾರಿ ಮತ್ತು ರಾಜ್ಯ ಸರಕಾರ ನಿಯೋಜಿಸಿರುವ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಎಲ್ಲ ವಿದ್ಯಾರ್ಥಿಗಳನ್ನು ಕರೆತರುವ ನಿಟ್ಟಿನಲ್ಲಿ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದರು.

ಕೇವಲ ಮಂಡ್ಯ ಅಲ್ಲದೆ ರಾಜ್ಯದ 29 ಜಿಲ್ಲೆಗಳ ವಿದ್ಯಾರ್ಥಿಗಳು ಉಕ್ರೇನ್ ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಕೂಡ ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಎಲ್ಲ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತರುವ ನಿಟ್ಟಿನಲ್ಲಿ ಕಾರ್ಯನಿರತರಾಗಿದ್ದಾರೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News