ಜಗತ್ತಿನಲ್ಲಿ ಪೋಲಿಯೋ ನಿರ್ಮೂಲನೆಗೆ ಎಲ್ಲರ ಸಹಕಾರ ಅಗತ್ಯ: ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್

Update: 2022-02-27 14:03 GMT

ಉಡುಪಿ, ಫೆ.27: ಎಲ್ಲಾ ಪೋಷಕರು 0-5 ವರ್ಷದೊಳಗಿನ ತಮ್ಮ ಮಕ್ಕಳಿಗೆ ತಪ್ಪದೆ ಪೋಲಿಯೋ ಹನಿ ಹಾಕಿಸುವ ಮೂಲಕ ವಿಶ್ವದಿಂದ ಪೊಲೀಯೋವನ್ನು ನಿರ್ಮೂಲನೆ ಮಾಡಲು ಸಹಕರಿಸಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ. ಹೇಳಿದ್ದಾರೆ.

ಉಡುಪಿಯ ಸರಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ರವಿವಾರ ನಡೆದ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತಿ ದ್ದರು.

ಭಾರತದಲ್ಲಿ 2011ರಿಂದ ಪೋಲಿಯೋ ಪ್ರಕರಣಗಳು ಕಂಡುಬಂದಿಲ್ಲ. ಆದರೆ ನೆರೆಯ ದೇಶದಲ್ಲಿ ಪೋಲಿಯೋ ಪ್ರಕರಣಗಳು ಕಂಡು ಬಂದಿರುವುದ ರಿಂದ ಆ ದೇಶಗಳಿಂದ ಆಗಮಿಸುವ ಪ್ರಯಾಣಿಕರ ಮೂಲಕ ಹರಡುವ ಸಾಧ್ಯತೆಗಳಿವೆ. ಈ ನಿಟ್ಟಿನಲ್ಲಿ ಎಲ್ಲಾ ಪೋಷಕರು ತಮ್ಮ 0-5 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ಹಾಕಿಸಬೇಕು. ಇಡೀ ಜಗತ್ತಿನಿಂದ ಪೋಲಿಯೋ ನಿರ್ಮೂಲನೆ ಮಾಡಲು ಎಲ್ಲರೂ ಸಹಕರಿಸಬೇಕು ಎಂದರು.

ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಜಿಲ್ಲೆಯ 0-5 ವರ್ಷದೊಳಗಿನ 73995 ಮಕ್ಕಳಿಗೆ ಪೋಲಿಯೋ ಲಸಿಕೆ ನೀಡಲು ಗುರಿ ಹೊಂದಿದ್ದು, ಗ್ರಾಮೀಣ ಪ್ರದೇಶದಲ್ಲಿ 571 ಹಾಗೂ ನಗರ ಪ್ರದೇಶದಲ್ಲಿ 91 ಸೇರಿದಂತೆ ಒಟ್ಟು 662 ಲಸಿಕಾ ಕೇಂದ್ರಗಳನ್ನು ಮತ್ತು 6 ಮೊಬೈಲ್ ಟೀಮ್ ಮತ್ತು 36 ಟ್ರಾನ್ಸಿಟ್ ಬೂತ್‌ಗಳನ್ನು ತರೆಯಲಾಗಿದೆ. 2794 ಲಸಿಕಾ ಸ್ವಯಂ ಸೇವಕರು ಮತ್ತು 125 ಮೇಲ್ವಿಚಾರಕರು ಹಾಗೂ ಆರೋಗ್ಯ ಇಲಾಖೆಯ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಗವಹಿಸಲಿದ್ದಾರೆ ಎಂದರು.

ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಎಂ.ಜಿ.ರಾಮ, ಉಡುಪಿ ತಾಲೂಕು ಆರೋಗ್ಯಾಧಿಕಾರಿ ಡಾ.ವಾಸುದೇವ ಉಡುಪ, ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸುಬ್ರಹಣ್ಯ ಶೇರಿಗಾರ್, ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕಿ ಡಾ.ಸ್ವರ್ಣಲತಾ, ರೋಟರಿ ಅಧ್ಯಕ್ಷ ಸುರೇಶ್ ಶೆಣೈ, ಐ.ಕೆ.ಜಯಚಂದ್ರ ಮೊದಲಾದವರು ಉಪಸ್ಥಿತರಿದ್ದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ಸ್ವಾಗತಿಸಿದರು. ಜಿಲ್ಲಾ ಸರ್ಜನ್ ಡಾ.ಮಧುಸೂದನ್ ನಾಯಕ್ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News