×
Ad

ಮಧ್ಯಪ್ರದೇಶದಲ್ಲಿ ದಲಿತ ಕಾರ್ಯಕರ್ತನಿಗೆ ಥಳಿಸಿ, ಬಲವಂತದಿಂದ ಮೂತ್ರ ಕುಡಿಸಿದ ದುಷ್ಕರ್ಮಿಗಳು: ಆರೋಪ

Update: 2022-02-28 15:38 IST

ಗ್ವಾಲಿಯರ್: ಮಧ್ಯಪ್ರದೇಶದ ಗ್ವಾಲಿಯರ್ ಜಿಲ್ಲೆಯ ಗ್ರಾಮ ಪಂಚಾಯತ್‌ಗೆ ಸಂಬಂಧಿಸಿದ ಮಾಹಿತಿ ಕೇಳಿದ 33 ವರ್ಷದ ದಲಿತ ಮಾಹಿತಿ ಹಕ್ಕು (ಆರ್‌ಟಿಐ) ಕಾರ್ಯಕರ್ತನಿಗೆ ಏಳು ಜನರು ಬಲವಂತವಾಗಿ ಥಳಿಸಿ ಮೂತ್ರ ಕುಡಿಸಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆಯ ನಂತರ, ತೀವ್ರವಾಗಿ ಗಾಯಗೊಂಡ ಬಲಿಪಶು ಶಶಿಕಾಂತ್ ಜಾತವ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (AIIMS) ಗೆ ಸ್ಥಳಾಂತರಿಸಲಾಯಿತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಫೆಬ್ರವರಿ 23 ರಂದು ನಡೆದ ಘಟನೆಯ ನಂತರ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜಾತವ್ ಅವರು ಪಾನಿಹಾರ್ ಪೊಲೀಸ್ ಠಾಣಾ ವ್ಯಾಪ್ತಿಯ ಬರ್ಹಿ ಗ್ರಾಮ ಪಂಚಾಯತ್ ಬಗ್ಗೆ ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಮಾಹಿತಿ ಕೋರಿದ್ದರು ಎಂದು ಸಂತ್ರಸ್ತ ನೀಡಿದ ದೂರನ್ನು ಉಲ್ಲೇಖಿಸಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜಯರಾಜ್ ಕುಬೇರ್ ತಿಳಿಸಿದ್ದಾರೆ.

ಇದರಿಂದ ಕೋಪಗೊಂಡ ಬರ್ಹಿ ಸರಪಂಚ್ ರ ಪತಿ, ಪಂಚಾಯತ್ ಕಾರ್ಯದರ್ಶಿ ಮತ್ತು ಇತರರು ಅವರನ್ನು ಫೆಬ್ರವರಿ 23 ರಂದು ಗ್ರಾಮ ಪಂಚಾಯತ್ ಕಚೇರಿಗೆ ಕರೆಸಿದ್ದರು ಎನ್ನಲಾಗಿದೆ. ವ್ಯಕ್ತಿಯನ್ನು ಮೊದಲು ಕೋಣೆಯಲ್ಲಿ ಕೂಡಿಹಾಕಲಾಯಿತು ಮತ್ತು ನಂತರ ಆರೋಪಿಗಳು ತೀವ್ರವಾಗಿ ಥಳಿಸಿದರು ಹಾಗೂ ಅವರ ವಿರುದ್ಧ ಜಾತಿವಾದಿ ಟೀಕೆಗಳನ್ನು ಸಹ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಸಂತ್ರಸ್ತನ ಹೇಳಿಕೆ ಪ್ರಕಾರ, ಆರೋಪಿಯು ಶೂ ಬಳಸಿ ಮೂತ್ರವನ್ನು ಕುಡಿಯುವಂತೆ ಒತ್ತಾಯಿಸಿದ್ದಾನೆ ಎಂದು ಅಧಿಕಾರಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News