×
Ad

ಉಕ್ರೇನ್‌ನಿಂದ ರಾಜ್ಯಕ್ಕೆ ವಾಪಸ್ ಆದವರಿಗೆ ಕೆಎಸ್ಸಾರ್ಟಿಸಿ ಬಸ್ ನಲ್ಲಿ ಉಚಿತ ಪ್ರಯಾಣ

Update: 2022-02-28 15:39 IST
ಸಾಂದರ್ಭಿಕ ಚಿತ್ರ

ಬೆಂಗಳೂರು: ಉಕ್ರೇನ್‌ ನಲ್ಲಿ ಸಿಲುಕಿರುವ ರಾಜ್ಯದ ವಿದ್ಯಾರ್ಥಿಗಳು ವಾಪಸ್ ಆಗುತ್ತಿದ್ದು, ಅವರಲ್ಲಿ ವಿಶೇಷವಾಗಿ ವಿದ್ಯಾರ್ಥಿ ಸಮುದಾಯದ ಪರಿಸ್ಥಿತಿಯನ್ನು ಪರಿಗಣಿಸಿ, ರಾಜ್ಯದ ಹತ್ತಿರದ ವಿಮಾನ ನಿಲ್ದಾಣದಿಂದ ರಾಜ್ಯದೊಳಗಿನ ಅವರ ಸ್ಥಳೀಯ ಸ್ಥಳಗಳಿಗೆ ಕೆಎಸ್ಸಾರ್ಟಿಸಿ ಬಸ್‌ನಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ.

ಈ ಬಗ್ಗೆ ಅಧಿಕಾರಿಗಳಿಗೆ ಕೆಎಸ್ಸಾರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ.ಕಳಸದ ಸೂಚನೆ ನೀಡಿದ್ದಾರೆ. 

ಕರ್ನಾಟಕ ರಾಜ್ಯ ವಿಮಾನ ನಿಲ್ದಾಣದೊಳಗಿನ ಎಲ್ಲಾ ನೋಡಲ್ ಅಧಿಕಾರಿಗಳು ಮತ್ತು ರಸ್ತೆ ಸಾರಿಗೆ ಸಂಸ್ಥೆಯ ಸಂಬಂಧಪಟ್ಟ ವ್ಯಾಪ್ತಿಯ ಅಧಿಕಾರಿಗಳು ಸಮನ್ವಯ ಸಾಧಿಸಿ ಉಚಿತ ಪ್ರಯಾಣವನ್ನು ಅನುವು ಮಾಡಿಕೊಡಬೇಕು ಎಂದು ಸೂಚನ ನೀಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News