×
Ad

ಮೇಕೆದಾಟು ಪಾದಯಾತ್ರೆ: ಕಾಂಗ್ರೆಸ್ ನಾಯಕರ ವಿರುದ್ಧ ಎಫ್ಐಆರ್ ದಾಖಲು

Update: 2022-02-28 16:30 IST

ರಾಮನಗರ: ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿ ಪಾದಯಾತ್ರೆ ನಡೆಸಿದ ಆರೋಪದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿರೋಧ ಪಕ್ಷದ ನಾಯಕ‌ ಸಿದ್ದರಾಮಯ್ಯ ಸೇರಿದಂತೆ 38 ಮಂದಿ ಕಾಂಗ್ರೆಸ್ ನಾಯಕರ ವಿರುದ್ಧ ರಾಮನಗರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಡಿ.ಕೆ. ಶಿವಕುಮಾರ್ ಅವರನ್ನು ಪ್ರಕರಣದಲ್ಲಿ‌ ಮೊದಲ ಆರೋಪಿಯಾಗಿಸಲಾಗಿದೆ. ನಂತರದಲ್ಲಿ‌ ಸಿದ್ದರಾಮಯ್ಯ, ಸಂಸದ ಡಿ.ಕೆ. ಸುರೇಶ್, ವಿಧಾನಸಭೆ ವಿಪಕ್ಷ ಉಪನಾಯಕ ಯು.ಟಿ. ಖಾದರ್,  ವಿಧಾನ ಪರಿಷತ್ ಸದಸ್ಯ ಎಸ್. ರವಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ, ಸಲೀಂ ಅಹ್ಮದ್, ಮುಹಮ್ಮದ್ ನಲಪಾಡ್ , ಈಶ್ವರ ಖಂಡ್ರೆ, ರಾಮಲಿಂಗಾರೆಡ್ಡಿ, ಎಂ.ಬಿ.‌ ಪಾಟೀಲ್, ಕೆ.ಎಚ್. ಮುನಿಯಪ್ಪ , ಚಿತ್ರ ನಟರಾದ ಸಾಧುಕೋಕಿಲ, ನೆನಪಿರಲಿ ಪ್ರೇಮ್ ಮತ್ತಿತರರ ವಿರುದ್ಧ ರಾಮನಗರದ ಐಜೂರು ಠಾಣೆ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News