ಮಂಗಳೂರು; ಬಾಲಕಿಗೆ ಲೈಂಗಿಕ ಕಿರುಕುಳ : ಆರೋಪಿ ಸೆರೆ
Update: 2022-03-01 22:40 IST
ಮಂಗಳೂರು, ಮಾ.1: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ದೇರಳಕಟ್ಟೆ ಸಮೀಪದ ಮಾಡೂರಿನ ಪವನ್ ಶೆಟ್ಟಿ (33) ಎಂಬಾತನನ್ನು ಮಹಿಳಾ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಆರೋಪಿಯು ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಬಗ್ಗೆ ಫೆ.22ರಂದು ಪ್ರಕರಣ ದಾಖಲಾಗಿತ್ತು. ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳವಾರ ಬಂಧಿಸಿದ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನವಾಗಿದೆ.